ಸಮಗ್ರ ನ್ಯೂಸ್: ಉಡುಪಿಯ ನೇಜಾರುವಿನಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿ ಪ್ರವೀಣ್ ಚೌಗಲೆ(39) ಮಹಾರಾಷ್ಟ್ರ ರಾಜ್ಯದ ಪುಣೆಯಲ್ಲಿ ಮೂರು ತಿಂಗಳ ಕಾಲ ಪೊಲೀಸ್ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸಿದ್ದನು ಎಂದು ತಿಳಿದು ಬಂದಿದೆ.
ಪೊಲೀಸ್ ತನಿಖೆಯ ಪ್ರಕಾರ, ಚೌಗುಲೆ ಮಹಾರಾಷ್ಟ್ರದ ಮಾಜಿ ಪೊಲೀಸ್ ಆಗಿದ್ದು, ಮಂಗಳೂರಿನ ಏರ್ ಇಂಡಿಯಾ ಕಂಪೆನಿಯಲ್ಲಿ ಕೆಲಸ ಸಿಕ್ಕಿರುವ ಹಿನ್ನೆಲೆಯಲ್ಲಿ ಪೊಲೀಸ್ ವೃತ್ತಿಗೆ ರಾಜೀನಾಮೆ ನೀಡಿದ್ದನು ಎನ್ನಲಾಗಿದೆ. ಬಳಿಕ ವಿಮಾನಯಾನ ಉದ್ಯಮಕ್ಕೆ ಸೇರಿಕೊಂಡಿದ್ದರು ಮತ್ತು ಏರ್ ಇಂಡಿಯಾದಲ್ಲಿ ಕ್ಯಾಬಿನ್ ಸಿಬ್ಬಂದಿ ಸದಸ್ಯರಾಗಿ ಕೆಲಸ ಮಾಡುತ್ತಿದ್ದರು. ಈತನಿಗೆ ಏರ್ ಇಂಡಿಯಾದಲ್ಲಿ ಗಗನಸಖಿಯಾಗಿ ಸೇರಿದ್ದ ಐನಾಝ್ ಅವರ ಪರಿಚಯವಾಗಿತ್ತು ಎಂದು ತಿಳಿದು ಬಂದಿದೆ.
ಮುಸ್ಲಿಂ ಹುಡುಗಿಯನ್ನು ಮದುವೆಯಾಗಿರುವ ಶಂಕಿತ ಹಂತಕ ಪ್ರವೀಣ್ ಚೌಗಲೆ, ಸದ್ಯ ಆಕೆ ಹಿಂದೂ ಹೆಸರಿನಲ್ಲಿ ಗುರುತಿಸಿಕೊಂಡಿದ್ದಾರೆ. ಪ್ರವೀಣ್ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ.