Ad Widget .

ವಿಶ್ವಕಪ್ ಕ್ರಿಕೆಟ್ ಸೆಮೀಸ್| ನ್ಯೂಜಿಲ್ಯಾಂಡ್ ಗೆ 398 ರನ್ ಗುರಿ ನೀಡಿದ ಭಾರತ

ಸಮಗ್ರ ನ್ಯೂಸ್: ಮುಂಬೈನ ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಪಂದ್ಯದಲ್ಲಿ ಭಾರತ ತಂಡ ನ್ಯೂಝಿಲ್ಯಾಂಡ್ ಗೆಲುವಿಗೆ 398 ರನ್ ಗಳ ಬೃಹತ್ ಗುರಿ ನೀಡಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ವಿರಾಟ್ ಕೊಹ್ಲಿ ದಾಖಲೆಯ 50 ನೇ ಶತಕ ಹಾಗೂ ಶ್ರೇಯಸ್ ಐಯ್ಯರ್ ಭರ್ಜರಿ ಆಟ, ಶುಭಮನ್ ಗಿಲ್ ಸ್ಟೋಟಕ ಅರ್ಧಶತಕದ ನೆರವಿನಿಂದ ಸೆಮಿ ಫೈನಲ್ ನಲ್ಲಿ ಕಿವೀಸ್ ವಿರುದ್ಧ ಭಾರತ ಭರ್ಜರಿ ಆಟ ಪ್ರದರ್ಶಿಸಿತು.

Ad Widget . Ad Widget . Ad Widget .

ಕಿವೀಸ್ ವಿರುದ್ಧ ಟಾಸ್ ಗೆದ್ದ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡರು. ಬ್ಯಾಟಿಂಗ್ ಬಂದ ಭಾರತ ತಂಡ ಭರ್ಜರಿ ಆರಂಭ ಪಡೆದುಕೊಂಡಿತು. ಮೊದಲ ವಿಕೆಟ್ ಪತನಕ್ಕೆ ನಾಯಕ ರೋಹಿತ್ ಶರ್ಮಾ 4 ಬೌಂಡರಿ 4 ಸಿಕ್ಸರ್ ಸಹಿತ ಸ್ಟೋಟಕ 47 ರನ್ ಪೇರಿಸಿದರು. ಶುಭಮನ್ ಗಿಲ್ 8 ಬೌಂಡರಿ 3 ಸಿಕ್ಸರ್ ಸಹಿತ 79 ರನ್ ಗಳಿಸಿ ಗಾಯದ ಸ್ವಯಂ ನಿವೃತ್ತಿ ಹೊಂದಿದ್ದರು. ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಬಂದಿದ್ದ ವಿರಾಟ್ ಕೊಹ್ಲಿ 9 ಬೌಂಡರಿ 2 ಸಿಕ್ಸರ್ ಸಹಿತ 117 ರನ್ ಬಾರಿಸಿ ಏಕದಿನ ಮಾದರಿಯಲ್ಲಿ ಗರಿಷ್ಠ ಶತಕ ದಾಖಲಿಸಿದ ಆಟಗಾರ ಎಂದೆನಿಸಿಕೊಂಡರು.

ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಏಕದಿನ ಮಾದರಿಯಲ್ಲಿ 50 ನೇ ಶತಕ ದಾಖಲಿಸುವುದರೊಂದಿಗೆ ಸಚಿನ್ ಅವರ ಹೆಸರಲ್ಲಿದ್ದ 49 ಅತೀ ಹೆಚ್ಚು ಶತಕದ ದಾಖಲೆ ಮುರಿದರು.

Leave a Comment

Your email address will not be published. Required fields are marked *