Ad Widget .

ವಿಶ್ವಕಪ್ ಕ್ರಿಕೆಟ್| ಆಸ್ಟ್ರೇಲಿಯಾ 8ನೇ ಬಾರಿ ಫೈನಲ್ ಗೆ ; ‘ಸೋತಾಫ್ರಿಕಾ’ ಮನೆಗೆ

ಸಮಗ್ರ ನ್ಯೂಸ್: ಏಕದಿನ ವಿಶ್ವಕಪ್​​ನ 2ನೇ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಾ ತಂಡ ರೋಚಕ ಜಯ ಸಾಧಿಸಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ನವೆಂಬರ್ 16ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ 2023ರ ಐಸಿಸಿ ಏಕದಿನ ವಿಶ್ವಕಪ್‌ನ 2ನೇ ಸೆಮಿಫೈನಲ್‌ನ ರೋಚಕ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 3 ವಿಕೆಟ್‌ಗಳ ಪ್ರಯಾಸದ ಗೆಲುವು ಸಾಧಿಸಿದ ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ದಾಖಲೆಯ 8ನೇ ಬಾರಿಗೆ ವಿಶ್ವಕಪ್ ಫೈನಲ್‌ ತಲುಪುವಲ್ಲಿ ಯಶಸ್ವಿಯಾಗಿದೆ.

Ad Widget . Ad Widget . Ad Widget .

ಇನ್ನು ಲೀಗ್ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡಿ, ಸೆಮಿಫೈನಲ್‌ನಲ್ಲಿ ಮತ್ತೊಮ್ಮೆ ಸೋಲು ಅನುಭವಿಸುವ ಮೂಲಕ ಚೋಕರ್ಸ್ ಎಂಬ ಕೆಟ್ಟ ಹಣೆಪಟ್ಟಿಯನ್ನು ದಕ್ಷಿಣ ಆಫ್ರಿಕಾ ತಂಡ ಹಾಗೇ ಉಳಿಸಿಕೊಂಡಿದೆ. ವಿಶ್ವಕಪ್ ಫೈನಲ್ ತಲುಪುವ ಹರಿಣಗಳ ದಶಕಗಳ ಕನಸು ಕನಸಾಗಿಯೇ ಉಳಿದಿದೆ.

2ನೇ ಸೆಮಿಫೈನಲ್‌ನಲ್ಲಿ ಗೆದ್ದ ಆಸ್ಟ್ರೇಲಿಯಾ ತಂಡವು ಭಾನುವಾರ, ನವೆಂಬರ್ 19ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುವ ಗ್ರ್ಯಾಂಡ್ ಫೈನಲ್‌ನಲ್ಲಿ ಆತಿಥೇಯ ಭಾರತ ತಂಡವನ್ನು ಎದುರಿಸಲಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡ ಡೇವಿಡ್ ಮಿಲ್ಲರ್ ಅಮೋಘ ಶತಕದ ಸಹಾಯದಿಂದ 49.4 ಓವರ್‌ಗಳಲ್ಲಿ 212 ರನ್‌ಗಳಿಗೆ ಆಲೌಟ್ ಆಗಿತ್ತು. ಈ ಮೂಲಕ ಆಸ್ಟ್ರೇಲಿಯಾ ತಂಡದ ಗೆಲುವಿಗೆ 213 ರನ್‌ಗಳ ಗುರಿ ನೀಡಲಾಗಿದೆ.

213 ರನ್‌ಗಳ ಸುಲಭ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡ ಟ್ರಾವಿಸ್ ಹೆಡ್ ಅವರ ಅರ್ಧಶತಕದ ನೆರವಿನಿಂದ 47.2 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಸೇರಿತು.

ತೂಗುಯ್ಯಾಲೆಯಂತೆ ಸಾಗಿದ ಈ ಸೆಮಿಫೈನಲ್ ಪಂದ್ಯವು ವಿಜಯಲಕ್ಷ್ಮಿ ಕೊನೆಯವರೆಗೂ ಉಭಯ ತಂಡಗಳಿಗೆ ಕಣ್ಮರೆಯಾಗಿದ್ದಳು. ಕೊನೆಯಲ್ಲಿ ತಾಳ್ಮೆಯ ಆಟಕ್ಕೆ ಮೊರೆ ಹೋದ ಆಸ್ಟ್ರೇಲಿಯನ್ನರಿಗೆ ಕೊನೆಗೂ ಗೆಲುವು ದಕ್ಕಿದೆ.

Leave a Comment

Your email address will not be published. Required fields are marked *