ನನ್ನನ್ನು ವಿರೋಧಿಸಿದರೆ, ಮೋದಿ ಅವರನ್ನು ವಿರೋಧಿಸಿದಂತೆ: ಬಿ. ವೈ. ವಿಜಯೇಂದ್ರ

ಸಮಗ್ರ ನ್ಯೂಸ್: ನನ್ನನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದು ನರೇಂದ್ರ ಮೋದಿಯವರು. ಹಾಗಾಗಿ ನನ್ನನ್ನು ವಿರೋಧಿಸಿದರೆ, ಪ್ರಧಾನಿ ಮೋದಿ ಅವರನ್ನು ವಿರೋಧಿಸಿದಂತೆ ಎಂದು ಹೇಳುವ ಮೂಲಕ ವಿರೋಧಿಗಳಿಗೆ ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಟಾಂಗ್ ಕೊಟ್ಟಿದ್ದಾರೆ.

Ad Widget ... ..

ನನ್ನನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿದವರು ಯಾರು? ಯಡಿಯೂರಪ್ಪನಾ? ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಷಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ನನ್ನನ್ನು ಪಕ್ಷದ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ್ದಾರೆ. ಸಚಿವ ಪ್ರಹ್ಲಾದ್ ಜೋಷಿ, ಬಿ. ಎಲ್. ಸಂತೋಷ್ ಅವರು ಮೊದಲು ಕರೆ ಮಾಡಿ ಅಭಿನಂದನೆ ತಿಳಿಸಿದ್ದಾರೆ. ವಿ. ಸೋಮಣ್ಣ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಭೇಟಿ ಮಾಡಿ ಮಾತನಾಡುತ್ತೇನೆ. ರಾಜ್ಯದ ಎಲ್ಲಾ 28 ಲೋಕಸಭಾ ಸೀಟುಗಳನ್ನು ಗೆಲ್ಲುವುದಷ್ಟೇ ನನ್ನ ಗುರಿ ಎಂದು ಅವರು ಹೇಳಿದ್ದಾರೆ

Ad Widget

Leave a Comment

Your email address will not be published. Required fields are marked *