ಬೆಳ್ತಂಗಡಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ| ಬಿಜೆಪಿ‌ ಕಾರ್ಯಕರ್ತನ ಮೇಲೆ‌ ಬಿತ್ತು ಕೇಸ್

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ರೀತಿಯಲ್ಲಿ ಮಾತನಾಡಿದ ಆಡಿಯೋ ವೈರಲ್ ಅಗಿದ್ದು, ಈ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಧರ್ಮಸ್ಥಳ ಪೊಲೀಸ್ ಠಾಣೆಗೆ ನೀಡಿರುವ ದೂರಿನಂತೆ ರಜಿತ್ ಕೊಕ್ಕಡ ಎಂಬಾತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Ad Widget ... ..

ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಕೋರಿಗದ್ದೆ ನಿವಾಸಿ, ಸೆಲೂನ್ ನಲ್ಲಿ ಕೆಲಸ ಮಾಡುವ ಬಿಜೆಪಿ ಕಾರ್ಯಕರ್ತ ರಜಿತ್ ಕೊಕ್ಕಡ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯ ಬಗ್ಗೆ ಅಶ್ಲೀಲವಾಗಿ ನಿಂದಿಸಿ ಮಾತನಾಡಿರುವ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತ ಹಕೀಮ್ ಕೊಕ್ಕಡ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Ad Widget

ಧರ್ಮಸ್ಥಳ ಪೊಲೀಸರು ರಜಿತ್ ಕೊಕ್ಕಡ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *