ಮಾದಕ ವಸ್ತು ಮಾರಾಟ ಮಾಡುತಿದ್ದ ಇಬ್ಬರ ಬಂಧನ

ಸಮಗ್ರ ನ್ಯೂಸ್: ಮಡಿಕೇರಿ – ಮಂಗಳೂರು ರಸ್ತೆಯಲ್ಲಿ ನಿಷೇಧಿತ MDMA ಮಾದಕ ವಸ್ತುವನ್ನು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಸುಳಿವಿನ ಮೇರೆ ಮಡಿಕೇರಿ ನಗರ ಪೊಲೀಸ್ ತನಿಖಾ ತಂಡ ದಾಳಿ ನಡೆಸಿದ ಘಟನೆ ನ. 19ರಂದು ವರದಿಯಾಗಿದೆ.

Ad Widget ... ..

ಕುಂಜಿಲ ನಿವಾಸಿ ನೌಫಲ್ (25) ಮತ್ತು ಎಮ್ಮೆಮಾಡು ಪೈಸಾರಿ ನಿವಾಸಿ ಸಾದಿಕ್ (32) ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಇವರಿಬ್ಬರು ಈ ಸಂದರ್ಭ ಆರೋಪಿಗಳನ್ನು ದಸ್ತಗಿರಿ ಮಾಡಿ 7.46 ಗ್ರಾಂ. MDMA ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿರುವ ಪೊಲೀಸ್ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕೆ. ರಾಮರಾಜನ್ ಅವರು ಶ್ಲಾಘಿಸಿದ್ದಾರೆ.

Ad Widget

Leave a Comment

Your email address will not be published. Required fields are marked *