ಸಮಗ್ರ ಉದ್ಯೋಗ: ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 11 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್ 24, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ . ಆಸಕ್ತರು ಆಫ್ಲೈನ್/ ಪೋಸ್ಟ್ ಮೂಲಕ ಅರ್ಜಿ ಹಾಕಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಬೇಗನೆ ಅರ್ಜಿ ಹಾಕಿ ಪೋಸ್ಟ್ ಆಫೀಸ್ ಉದ್ಯೋಗ ಪಡೆದುಕೊಳ್ಳಿ.
ವಿದ್ಯಾರ್ಹತೆ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು.
ವಯೋಮಿತಿ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನವೆಂಬರ್ 24, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹19,900-63,200 ಸಂಬಳ ಕೊಡಲಾಗುತ್ತದೆ.
ಅರ್ಜಿ ಶುಲ್ಕ:
SC/ST/ESM ಮತ್ತು ಮಹಿಳಾ ಅಭ್ಯರ್ಥಿಗಳು: ಅರ್ಜಿ ಶುಲ್ಕ ಇಲ್ಲ
ಎಲ್ಲಾ ಇತರೆ ಅಭ್ಯರ್ಥಿಗಳು: ರೂ.100/-
ಪಾವತಿ ವಿಧಾನ: ಭಾರತೀಯ ಪೋಸ್ಟಲ್ ಆರ್ಡರ್
ಉದ್ಯೋಗದ ಸ್ಥಳ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಧ್ಯಪ್ರದೇಶದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಡ್ರೈವಿಂಗ್ ಲೈಸೆನ್ಸ್
ಡ್ರೈವಿಂಗ್ ಟೆಸ್ಟ್
ಟ್ರೇಡ್ ಟೆಸ್ಟ್
ಥಿಯರಿ ಟೆಸ್ಟ್
ಪ್ರಾಕ್ಟಿಕಲ್ ಟೆಸ್ಟ್
ಅರ್ಜಿ ಸಲ್ಲಿಸಲು ಕೊನೆಯ ದಿನ: ನವೆಂಬರ್ 24, 2023(ನಾಳೆ)
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಅಸಿಸ್ಟೆಂಟ್ ಡೈರೆಕ್ಟರ್ (Estt/Rectt)
O/o ಮುಖ್ಯ ಪೋಸ್ಟ್ಮಾಸ್ಟರ್ ಜನರಲ್
M.P. ವೃತ್ತ
ಭೋಪಾಲ್-462027