ಸಮಗ್ರ ನ್ಯೂಸ್: ಜನರ ಬಳಿಗೇ ಆಡಳಿತ ಕೊಂಡೊಯ್ಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 27 ರಂದು ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಕಳೆದ ತಿಂಗಳೇ ಮುಖ್ಯಮಂತ್ರಿಗಳ ಜನತಾದರ್ಶನ ನಿಗದಿಯಾಗಿತ್ತಾದರೂ ಎಐಸಿಸಿ ನಾಯಕರು ದೆಹಲಿಯಲ್ಲಿ ರಾಜ್ಯ ಸರ್ಕಾರದ ಎಲ್ಲಾ ಸಚಿವರ ಸಭೆ ಕರೆದ ಹಿನ್ನೆಲೆಯಲ್ಲಿ ಜನತಾದರ್ಶನವನ್ನು ಮುಂದೂಡಲಾಗಿತ್ತು.
ಮುಖ್ಯಮಂತ್ರಿಗಳ ಸೂಚನೆಯಂತೆ ಹಲವು ಜಿಲ್ಲಾ ಉಸ್ತುವಾರಿ ಸಚಿವರುಗಳು ತಮ್ಮ ಜಿಲ್ಲೆಗಳಲ್ಲಿ ಜನತಾದರ್ಶನ ನಡೆಸಿ ಜನರ ಅಹವಾಲುಗಳನ್ನು ಆಲಿಸಿದ್ದರು. ಇದೀಗ ಸ್ವತಃ ಮುಖ್ಯಮಂತ್ರಿಯವರು ಬೆಂಗಳೂರಿನಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಬಗೆಹರಿಸಲು ಕ್ರಮ ಕೈಗೊಳ್ಳಲಿದ್ದಾರೆ.