ಸಮಗ್ರ ನ್ಯೂಸ್: ಶಬರಿಮಲೆ ಯಾತ್ರೆಯ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಹುಬ್ಬಳ್ಳಿಯಿಂದ ಕೊಟ್ಟಾಯಂ ಗೆ ಎರಡು ವಿಶೇಷ ರೈಲು ಆರಂಭಿಸಿದ್ದು, ಯಾತ್ರಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಭಾರತೀಯ ಅಯ್ಯಪ್ಪ ಸೇವಾ ಸಂಘದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಿವಪ್ಪ ಬಾರ್ಕಿ ತಿಳಿಸಿದ್ದಾರೆ.
ಶಬರಿಮಲೆಗೆ ಹೋಗುವ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಕಳೆದ ವರ್ಷ ಸಾಲುಮರದ ತಿಮ್ಮಕ್ಕ, ಭಾರತೀಯ ಅಯ್ಯಪ್ಪ ಸ್ವಾಮಿ ಸೇವಾ ಸಂಘದ ರಾಷ್ಟ್ರೀಯ ಅಧ್ಯಕ್ಷ ಬಳ್ಳೂರ ಉಮೇಶ ಅವರ ನೇತೃತ್ವದಲ್ಲಿ ರೈಲ್ವೆ ಹಾಗೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಇದಕ್ಕೆ ಸ್ಪಂದಿಸಿದ ಅವರು ಎರಡು ವಿಶೇಷ ರೈಲು ಆರಂಭಿಸಲು ಅನುಮತಿ ನೀಡಿದ್ದರು.
ಡಿ.2ರಿಂದ 20 ರವರೆಗೆ ಸೌಲಭ್ಯ ಆರಂಭವಾಗಲಿದ್ದು, ವಾರದಲ್ಲಿ ಎರಡು ರೈಲುಗಳು ಚಲಿಸುತ್ತವೆ. ಪ್ರತಿ ಶನಿವಾರ ಹುಬ್ಬಳ್ಳಿಯಿಂದ ಕೊಟ್ಟಾಯಂಗೆ ರೈಲು ಬೆಳಿಗ್ಗೆ 10.30ಕ್ಕೆ ಹೊರಡಲಿದೆ. ಕೊಟ್ಟಾಯಂನಿಂದ ಹುಬ್ಬಳ್ಳಿಗೆ ರೈಲು ಪ್ರತಿ ಭಾನುವಾರ ಬೆಳ್ಳಿಗೆ 11 ಗಂಟೆಗೆ ಹೊರಡಲಿದೆ.
ಡಿ. 5ರಿಂದ 17 ಪ್ರತಿ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿಯಿಂದ ಕೊಟ್ಟಾಯಂಗೆ ಹೊರಡಲಿದೆ. ಡಿ.೬ರಿಂದ ಕೊಟ್ಟಾಯಂ ನಿಂದ ಹುಬ್ಬಳ್ಳಿಗೆ ಪ್ರತಿ ಬುಧವಾರ ಬೆಳಿಗ್ಗೆ 11 ಗಂಟೆಗೆ ಹೊರಡಲಿದೆ.