Ad Widget .

ಶಾಲಾ ಶೈಕ್ಷಣಿಕ ಪ್ರವಾಸಕ್ಕೆ ಖಾಸಗಿ ವಾಹನ‌ ಬಳಕೆಗೆ ಸರ್ಕಾರದಿಂದ ಬ್ರೇಕ್

ಸಮಗ್ರ‌ ನ್ಯೂಸ್: ವರ್ಷಾಂತ್ಯಕ್ಕೆ ದಿನಗಣನೆ ಶುರುವಾಗುತ್ತಿದ್ದಂತೆ ಶಾಲಾ, ಕಾಲೇಜುಗಳ ಶೈಕ್ಷಣಿಕ ಪ್ರವಾಸಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ. ಇದರ ನಡುವೆ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಠಿಯಿಂದ ಖಾಸಗಿ ವಾಹನಗಳ ಬಳಸಿ ಪ್ರವಾಸ ಹೊರಡುವುದಕ್ಕೆ ರಾಜ್ಯದ ಶಿಕ್ಷಣ ಇಲಾಖೆ ಬ್ರೇಕ್‌ ಹಾಕಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಶಾಲಾ ಶೈಕ್ಷಣಿಕ ಪ್ರವಾಸವನ್ನು ಕಡ್ಡಾಯವಾಗಿ ಕೆಎಸ್‌ಆರ್‌ಟಿಸಿ ಹಾಗೂ ಪ್ರವಾಸೋದ್ಯಮ ಇಲಾಖೆ ವಾಹನಗಳಲ್ಲಿ ಮಾತ್ರ ತೆರಳಬೇಕು. ಯಾವುದೇ ಕಾರಣಕ್ಕೂ ಅನಧಿಕೃತ ಹಾಗು ಖಾಸಗಿ ವಾಹನಗಳಲ್ಲಿ ಶಾಲಾ ಶೈಕ್ಷಣಿಕ ಪ್ರವಾಸ ಮಾಡಬಾರದೆಂದು ಶಿಕ್ಷಣ ಇಲಾಖೆ ಆಯುಕ್ತರು ಶಾಲೆಗಳ ಮುಖ್ಯ ಶಿಕ್ಷಕರಿಗೆ ಮಹತ್ವದ ಸುತ್ತೋಲೆ ಹೊರಡಿಸಿ ಆದೇಶಿಸಿದೆ.

Ad Widget . Ad Widget . Ad Widget .

ಪ್ರವಾಸದ ಸಂದರ್ಭದಲ್ಲಿ ಸಂಭವಿಸುವ ಅವಘಡಗಳಿಗೆ ಆಯಾ ಶಾಲೆಗಳ ಮುಖ್ಯಸ್ಥರು ನೇರ ಹೊಣೆ ಆಗಿರುತ್ತಾರೆ. ಇಲಾಖೆ ಜವಾಬ್ದಾರಿ ಆಗುವುದಿಲ್ಲ ಎಂದು ತಿಳಿಸಿರುವ ಶಿಕ್ಷಣ ಇಲಾಖೆ ಆಯಕ್ತರು, ಪ್ರವಾಸ ಕೈಗೊಳ್ಳುವ ವಿದ್ಯಾರ್ಥಿನಿಯರ ಮೇಲ್ವಿಚಾರಣೆಯನ್ನು ಕಡ್ಡಾಯವಾಗಿ ನಿಯೋಜಿತ ಮಹಿಳಾ ಶಿಕ್ಷಕರೇ ನೋಡಿಕೊಳ್ಳಬೇಕೆಂದು ಸೂಚಿಸಿದೆ.

ಶಾಲಾ ಪ್ರವಾಸ ಕಲಿಕೆಗೆ ಪೂರಕವಾದ ಸ್ಥಳಗಳನ್ನು ಮಾತ್ರ ಆಯ್ಕೆ ಮಾಡಿಕೊಳ್ಳಬೇಕೆಂದು ಸೂಚಿಸಿದ್ದು ಶೈಕ್ಷಣಿಕ ಪ್ರವಾಸ ಶಾಲಾ ದಿನಗಳಲ್ಲಿ ಕೈಗೊಂಡಿದ್ದಲ್ಲಿ ಕೊರತೆ ಆಗುವ ಪಠ್ಯದ ಚಟುವಟಿಕೆಗಳನ್ನು ಶನಿವಾರ ಅಥವ ಭಾನುವಾರ ನಡೆಸಿ ಸರಿದೂಗಿಸುವಂತೆ ಶಿಕ್ಷಕರಿಗೆ ಇಲಾಖೆ ನಿರ್ದೇಶನ ನೀಡಿದೆ. ಪ್ರವಾಸ ಹೊರಡುವ ಮುನ್ನ ಇಲಾಖೆ ಅದರಲ್ಲೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಅನುಮತಿ ಪಡೆಯಬೇಕು, ಶಿಕ್ಷಕರ ಹಾಗೂ ವಿದ್ಯಾರ್ಥಿಗಳು ಪಟ್ಟಿಯನ್ನು ಇಲಾಖೆಯಿಂದ ಅನುಮೋದನೆ ಪಡೆಯಬೇಕೆಂದು ಹೇಳಿದೆ.

Leave a Comment

Your email address will not be published. Required fields are marked *