ಸಮಗ್ರ ನ್ಯೂಸ್: ಪಂಚರಾಜ್ಯಗಳ ಪೈಕಿ ಮಿಜೋರಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆಯ ದಿನಾಂಕವನ್ನು ಡಿಸೆಂಬರ್ 3ರಿಂದ ಡಿಸೆಂಬರ್ 4ಕ್ಕೆ ಮುಂದೂಡಲಾಗಿದೆ ಎಂದು ಚುನಾವಣಾ ಆಯೋಗ ಶುಕ್ರವಾರ ತಿಳಿಸಿದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‍ಗಡ ಮತ್ತು ತೆಲಂಗಾಣ ವಿಧಾನಸಭಾ ಚುನಾವಣಾ ಫಲಿತಾಂಶ ಭಾನುವಾರವೇ ಹೊರಬೀಳಲಿದೆ.
ಮಿಜೋರಾಂ ರಾಜ್ಯದಲ್ಲಿ ಕ್ರೈಸ್ತ ಸಮುದಾಯವರು ಹೆಚ್ಚಿನ ಸಂಖ್ಯೆಯಲ್ಲಿದ್ದು ಭಾನುವಾರ ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದ್ದು, ಆ ದಿನ ವಿಶೇಷ ಪ್ರಾರ್ಥನೆ ನಡೆಯಲಿದೆ. ಹೀಗಾಗಿ ವಿವಿಧ ವಲಯಗಳಿಂದ ಬಂದ ಮನವಿಯನ್ನು ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಚುನಾವಣಾ ಆಯೋಗವು ತಿಳಿಸಿದೆ.
40 ಸ್ಥಾನಗಳ ಮಿಜೋರಾಂ ವಿಧಾನಸಭೆಗೆ ನವೆಂಬರ್ 7ರಂದು ಮತದಾನ ನಡೆದಿತ್ತು. ಬಹುತೇಕ ಸಂಸ್ಥೆಗಳ ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ ಮಿಜೋರಾಂನಲ್ಲಿ ಅತಂತ್ರ ಫಲಿತಾಂಶ ದಾಖಲಾಗಲಿದೆ.