ಸಮಗ್ರ ನ್ಯೂಸ್: ರಾಷ್ಟೀಯ ಹಬ್ಬಗಳ ದಿನಾಚರಣಾ ಸಮಿತಿ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ ಶ್ರೀ ಕನಕದಾಸ ಜಯಂತಿ ಆಚರಣೆಯನ್ನು ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನ.30 ರಂದು ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ನಗರ ಪಂಚಾಯತ್ ಸದಸ್ಯ, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ವೆಂಕಪ್ಪ ಗೌಡರು ಮಾತನಾಡಿ ಸರಕಾರಿ ಕಾರ್ಯಕ್ರಮಗಳನ್ನು ಆಚರಿಸಲು ಕೆಲವೊಂದು ನಿಯಮಗಳಿವೆ. ಸ್ಥಳೀಯ ಜನಪ್ರತಿನಿಧಿಗಳನ್ನು, ಸಾಮಾಜಿಕ ಮುಖಂಡರುಗಳನ್ನು ಕರೆದು ಕಾರ್ಯಕ್ರಮ ನಡೆಸಬೇಕು. ಅಲ್ಲದೆ ಸರಕಾರಿ ಕಚೇರಿಗಳು, ಸಭಾಭವನ ಇದೆ ಅದರಲ್ಲಿ ಮಾಡಬೇಕು. ಆದರೆ ಇಂದಿನ ಕಾರ್ಯಕ್ರಮಕ್ಕೆ ಎಲ್ಲಾ ಜನಪ್ರತಿನಿಧಿಗಳಿಗೆ ತಿಳಿಸದೇ ನಡೆಸಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
ಅಲ್ಲದೆ ಈ ರೀತಿಯಾಗಿ ಧಾರ್ಮಿಕ ಸಂಸ್ಥೆಗಳಲ್ಲಿ ಕಾರ್ಯಕ್ರಮ ಆಯೋಜಿಸುವುದರಿಂದ ಎಲ್ಲಾ ನಾಗರಿಕರು, ಜನಪ್ರತಿನಿಧಿಗಳು ಭಾಗವಹಿಸಲು ಸಾಧ್ಯವಾಗುವುದಿಲ್ಲ, ಈ ರೀತಿ ಕಾರ್ಯಕ್ರಮ ನಡೆಸುವುದು ಮಹತ್ವಪೂರ್ಣ ಕಾರ್ಯಕ್ರಮಗಳ ಘನತೆಗೆ ತಕ್ಕುದಲ್ಲ ಎಂದು ಮಾತಿನಲ್ಲೇ ಅಧಿಕಾರಿಗಳಿಗೆ ಚಾಟಿ ಬೀಸಿದರು.
ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಚಂದ್ರಶೇಖರ ದಾಮ್ಲೆ ವಿಶೇಷ ಉಪನ್ಯಾಸ ನೀಡಿದರು. ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿಯ ಅಧ್ಯಕ್ಷ, ತಹಶೀಲ್ದಾರ್ ಜಿ.ಮಂಜುನಾಥ್, ತಾಲೂಕು ಪಂಚಾಯತ್
ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ ಎಂ.ಎಚ್, ನಾದಮಂಟಪದ ಹರಿಹರ ಬಾಯಾಡಿ, ಸಿಎ ಗಣೇಶ್ ಭಟ್ ಪಿ, ನಗರಪಂಚಾಯತ್ ಸದಸ್ಯರಾದ ಎಂ.ವೆಂಕಪ್ಪ ಗೌಡ, ಶೀಲಾ
ಅರುಣ ಕುರುಂಜಿ, ಕಿಶೋರಿ ಶೇಟ್, ಶಿಲ್ಪಾ ಸುದೇವ್, ಸುಶೀಲಾ ಜಿನ್ನಪ್ಪ ಮತ್ತಿತರರು ಉಪಸ್ಥಿತರಿದ್ದರು.