Ad Widget .

ಕೇಂದ್ರ ಸರ್ಕಾರದಿಂದ ‘ಕನ್ನಡ ಕಡ್ಡಾಯ‌’ ಮಸೂದೆ ತಿರಸ್ಕಾರ

ಸಮಗ್ರ ನ್ಯೂಸ್: ರಾಜ್ಯದ ಎಲ್ಲಾ ಶಾಲೆಗಳಲ್ಲಿ ಒಂದರಿಂದ 5ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ಮಾತೃ ಭಾಷೆ ಅಥವಾ ರಾಜ್ಯ ಭಾಷೆಯನ್ನು ಶಿಕ್ಷಣ ಮಾಧ್ಯಮವಾಗಿ ಕಡ್ಡಾಯಗೊಳಿಸುವ ಮಸೂದೆಯನ್ನು ಕೇಂದ್ರ ಸರ್ಕಾರ ತಿರಸ್ಕಾರ ಮಾಡಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

2015ರಲ್ಲಿ ರಾಜ್ಯ ವಿಧಾನ ಮಂಡಲದ ಉಭಯ ಸದನಗಳಾದ ವಿಧಾನಸಭೆ ಮತ್ತು ವಿಧಾನಪರಿಷತ್‍ನಲ್ಲಿ 1ರಿಂದ 5ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ಮಾತೃ ಭಾಷೆ ಅಥವಾ ರಾಜ್ಯ ಭಾಷೆಯನ್ನು ಶಿಕ್ಷಣ ಮಾಧ್ಯಮವಾಗಿ ಕಡ್ಡಾಯಗೊಳಿಸಿ ಅಂಗೀಕರಿಸಿದ ಮಸೂದೆಯನ್ನು ಕೇಂದ್ರ ಸರ್ಕಾರದ ಅಂಕಿತಕ್ಕೆ ಕಳುಹಿಸಿಕೊಡಲಾಗಿತ್ತು.

Ad Widget . Ad Widget . Ad Widget .

ಆದರೆ, ಕೇಂದ್ರ ಸರ್ಕಾರವು ಮಾತೃಭಾಷೆನ್ನು ಕಡ್ಡಾಯಗೊಳಿಸುವುದು, ಶಿಕ್ಷಣದ ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ಮಸೂದೆಯನ್ನು ತಿರಸ್ಕಾರ ಮಾಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪ ಬಹಿರಂಗಪಡಿಸಿದ್ದಾರೆ.

ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಯು.ಬಿ.ವೆಂಕಟೇಶ್ ಅವರು ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸುಪ್ರೀಂಕೋರ್ಟ್ ತೀರ್ಪು ಆಧರಿಸಿ ರಾಜ್ಯದ ಈ ವಿಧೇಯಕವನ್ನು ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ಕೇಂದ್ರ ಶಿಕ್ಷಣ ಇಲಾಖೆ ತಿರಸ್ಕರಿಸಿದೆ ಎಂದು ವಿಧಾನ ಪರಿಷತ್ತಿನಲ್ಲಿ ತಿಳಿಸಿದರು.

ಕಳೆದ ಎಂಟು ವರ್ಷಗಳಿಂದ ಈ ವಿಧೇಯಕಕ್ಕೆ ಅನುಮೋದನೆ ಸಿಕ್ಕಿಲ್ಲ. ರಾಜ್ಯವನ್ನು ಪ್ರತಿನಿಧಿಸುವ ಸಂಸದರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಾಗೂ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಲಿ. ನಮ್ಮ ಭಾಷೆಯನ್ನು ನಾವೇ ರಕ್ಷಣೆ ಮಾಡಿಕೊಳ್ಳಲು ಮುಂದಾಗಿರುವುದು ಅತ್ಯಂತ ನೋವಿನ ಸಂಗತಿ ಎಂದು ವಿಷಾದಿಸಿದರು.

Leave a Comment

Your email address will not be published. Required fields are marked *