Ad Widget .

ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡುವ ಭಕ್ತಾದಿಗಳಿಗೆ ಮಹತ್ವದ ಸೂಚನೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕೇಂದ್ರ ಕುಕ್ಕೆ ಸುಬ್ರಮಣ್ಯ. ಪ್ರತಿನಿತ್ಯ ನೂರಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡುತ್ತಾರೆ. ವಾರಾಂತ್ಯ, ಸರ್ಕಾರಿ ರಜೆ ದಿನಗಳಲ್ಲಿ ದೇವಾಲಯಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಈ ವಾರಾಂತ್ಯದಲ್ಲಿ ಕುಕ್ಕೆ ಸುಬ್ರಮಣ್ಯ ಪ್ರವಾಸ ಕೈಗೊಳ್ಳುವ ಭಕ್ತರಿಗೆ ಮಹತ್ವದ ಮಾಹಿತಿಯೊಂದಿದೆ. ದೇವಾಲಯಲ್ಲಿ ದರ್ಶನ ಮತ್ತು ವಿವಿಧ ಸೇವೆಗಳು ಅರ್ಧ ದಿನದ ಕಾಲ ಲಭ್ಯವಿರುವುದಿಲ್ಲ ಎಂದು ದೇವಾಲಯದ ಆಡಳಿತ ಮಂಡಳಿ ಹೇಳಿದೆ.

Ad Widget . Ad Widget . Ad Widget .

ಮಹಾತೋಭಾರ ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನ, ಸುಬ್ರಮಣ್ಯ, ಕಡಬ ತಾಲೂಕು ದಕ್ಷಿಣ ಕನ್ನಡ ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ಶ್ರೀ ದೇವಳದಲ್ಲಿ 2023-24ನೇ ಸಾಲಿನ ವಾರ್ಷಿಕ ಜಾತ್ರಾ ಮಹೋತ್ಸವ ಸಂಬಂಧ ದಿನಾಂಕ 09/12/2023ರ ಶನಿವಾರ “ಮೂಲಮೃತಿಕಾ” ಪ್ರಸಾದ ತೆಗೆಯುವ ಕಾರ್ಯಕ್ರಮ ಇರುತ್ತದೆ. ಆದ್ದರಿಂದ ಭಕ್ತಾದಿಗಳಿಗೆ ಬೆಳಗ್ಗಿನಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಶ್ರೀ ದೇವರ ದರ್ಶನ ಹಾಗೂ ಸೇವೆ ನೆರವೇರಿಸಲು ಅವಕಾಶವಿರುವುದಿಲ್ಲ. ಭಕ್ತಾದಿಗಳು ಸಹಕರಿಸಬೇಕು ಎಂದು ಮನವಿ ಮಾಡಲಾಗಿದೆ.

Leave a Comment

Your email address will not be published. Required fields are marked *