ಸಮಗ್ರ ಉದ್ಯೋಗ: Bangalore Development Authority ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಟೈಪಿಸ್ಟ್ ಸ್ಟೆನೋಗ್ರಾಫರ್ ,ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಆಸಕ್ತರು ಆಫ್ಲೈನ್/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ಡಿಸೆಂಬರ್ 8, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಹುದ್ದೆಯ ಮಾಹಿತಿ:
ಟೈಪಿಸ್ಟ್ -1
ಸ್ಟೆನೋಗ್ರಾಫರ್-1
ವಿದ್ಯಾರ್ಹತೆ:
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 8, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಟೈಪಿಸ್ಟ್ -ಮಾಸಿಕ ₹ 21,400-42,000
ಸ್ಟೆನೋಗ್ರಾಫರ್- ಮಾಸಿಕ ₹ 27,650-52,650
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಮೆರಿಟ್ ಲಿಸ್ಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ನಾಳೆಯೊಳಗೆ ಕಳುಹಿಸಬೇಕು.
ಆಯುಕ್ತರು
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಟಿ. ಚೌಡಯ್ಯ ರಸ್ತೆ
ಕುಮಾರ ಪಾರ್ಕ್ ಪಶ್ಚಿಮ
ಬೆಂಗಳೂರು – 560020
ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆಯ ದಿನ: ಡಿಸೆಂಬರ್ 8, 2023 (ನಾಳೆ). ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.