ಸಮಗ್ರ ನ್ಯೂಸ್: ಮೈಚಾಂಗ್ ಚಂಡಮಾರುತ (Cyclone Maichang)ದಿಂದ ಉಂಟಾದ ಹಾನಿಯನ್ನು ಪರಿಹಾರ ಕಾರ್ಯಗಳಿಗಾಗಿ ಕೇಂದ್ರ ಸರ್ಕಾರ ರಾಜ್ಯ ವಿಪತ್ತು ಪರಿಹಾರ ನಿಧಿಯ ಎರಡನೇ ಕಂತಿನಲ್ಲಿ ತಮಿಳುನಾಡಿಗೆ ಮುಂಗಡವಾಗಿ 450 ಕೋಟಿ ಮತ್ತು ರಾಷ್ಟ್ರೀಯ ವಿಪತ್ತು ತಗ್ಗಿಸುವಿಕೆ ನಿಧಿಯಡಿಯಲ್ಲಿ ಚೆನ್ನೈ ಜಲಾನಯನ ಯೋಜನೆಗಾಗಿ 561.29 ಕೋಟಿ ರೂ. ಗಳ ನಗರ ಪ್ರವಾಹ ಪರಿಹಾರ ಯೋಜನೆಯನ್ನು ಮಂಜೂರು ಮಾಡಿದ್ದಾರೆ. ತಮಿಳುನಾಡಿನ ಪ್ರವಾಹ ಪೀಡಿತ ನಾಲ್ಕು ಜಿಲ್ಲೆಗಳಲ್ಲಿ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಎರಡು ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ, ಕೇಂದ್ರ ಸರ್ಕಾರ ಈಗಾಗಲೇ ತಮಿಳುನಾಡು ಮತ್ತು ಆಂಧ್ರ ಪ್ರದೇಶ ಎರಡೂ ರಾಜ್ಯಗಳಿಗೆ ಒಂದೇ ಮೊತ್ತದ 1ನೇ ಕಂತನ್ನು ಬಿಡುಗಡೆ ಮಾಡಿದೆ. ಸಂತ್ರಸ್ತರೆಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ. ಈ ಸಂಕಷ್ಟದ ಸಮಯದಲ್ಲಿ ನಾವು ಅವರೊಂದಿಗೆ ನಿಲ್ಲುತ್ತೇವೆ ಮತ್ತು ಪರಿಸ್ಥಿತಿಯು ಆದಷ್ಟು ಬೇಗ ಸಹಜ ಸ್ಥಿತಿಗೆ ಮರಳಲಿದೆ ಎಂದು ತಿಳಿಸಿದ್ದಾರೆ.
ರಾಜ್ಯಗಳ ಅನೇಕ ಪ್ರದೇಶಗಳು ಮುಳುಗಡೆಯಾಗಿವೆ. ಸೈಕ್ಲೋನಿಕ್ ಚಂಡಮಾರುತದಿಂದ ಅಗತ್ಯವಿರುವ ಪರಿಹಾರದ ನಿರ್ವಹಣೆಯೊಂದಿಗೆ ರಾಜ್ಯ ಸರ್ಕಾರಗಳಿಗೆ ಸಹಾಯ ಮಾಡಲು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗೃಹ ಸಚಿವಾಲಯಕ್ಕೆ 2ನೇ ಕಂತಿನಲ್ಲಿ 493.60 ಕೋಟಿ ರೂ. ಆಂಧ್ರಪ್ರದೇಶಕ್ಕೆ ಮತ್ತು ತಮಿಳುನಾಡಿಗೆ 450 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ ಎಂದು ಅಮಿತ್ ಶಾ ತಿಳಿಸಿದ್ದಾರೆ.