ಸಮಗ್ರ ನ್ಯೂಸ್: ಬೆಂಗಳೂರಿನ ಇಂದಿರಾ ಕ್ಯಾಂಟೀನ್‍ಗಳಲ್ಲಿ ಮಧ್ಯಾಹ್ನ ಮತ್ತು ರಾತ್ರಿ ಊಟಕ್ಕೆ ಮುದ್ದೆ, ಚಪಾತಿ ನೀಡುವುದಕ್ಕೆ ಬೇಡಿಕೆ ಕೇಳಿ ಬರುತ್ತಿದ್ದು, ಮುಂದಿನ ದಿನಗಳಲ್ಲಿ ಇಂದಿರಾ ಕ್ಯಾಂಟೀನ್‍ಗಳಲ್ಲಿ ಮುದ್ದೆ ಊಟದ ವ್ಯವಸ್ಥೆಗೆ ಬಿಬಿಎಂಪಿ ಸಿದ್ಧತೆ ನಡೆಸಿದೆ. ಕರುನಾಡಿನ ಸುಗ್ಗಿಯ ಹಬ್ಬ ಸಂಕ್ರಾಂತಿ ವೇಳೆಗೆ ಇಂದಿರಾ ಕ್ಯಾಂಟೀನ್‍ನಲ್ಲಿ ಮುದ್ದೆ ದೊರೆಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಇಲ್ಲಿಯವರೆಗೆ ಇಂದಿರಾ ಕ್ಯಾಂಟೀನ್‍ಗಳಲ್ಲಿ ಕೇವಲ ರೈಸ್ ಬಾತ್ ಅಥವಾ ಅನ್ನ, ಸಾಂಬರ್, ಮೊಸರನ್ನ ಮಾತ್ರ ಕೊಡಲಾಗುತ್ತಿತ್ತು. ಆದರೆ ಹಲವರು, ಕೇವಲ ರೈಸ್ ಬೇಡ, ಮುದ್ದೆ, ಚಪಾತಿಯನ್ನೂ ನೀಡುವಂತೆ ಕೇಳುತ್ತಿದ್ದರು. ಈ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ನಲ್ಲಿ ಮುದ್ದೆ ಕೊಡಲು ತೀರ್ಮಾನಿಸಲಾಗಿದೆ. ಮಧ್ಯಾಹ್ನ ಮತ್ತು ರಾತ್ರಿ ಊಟಕ್ಕೆ ಮಾತ್ರ ಮುದ್ದೆ ನೀಡುವುದಕ್ಕೆ ತೀರ್ಮಾನಿಸಲಾಗಿದ್ದು, ಮುದ್ದೆ ಕೊಡುವುದರಿಂದ ಇಂದಿರಾ ಕ್ಯಾಂಟೀನ್‍ಗಳಲ್ಲಿ ಗ್ರಾಹಕರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯೂ ಇದೆ.