Ad Widget .

‘ಸಿಡಿ’ಯೊಳಗೆ ಬಿದ್ದರಾ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ? ವರದಿ ಪ್ರಸಾರ ಮಾಡದಂತೆ ಕೋರ್ಟ್ ನಿಂದ ನಿರ್ಬಂಧಕಾಜ್ಞೆ…!

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬೆಂಗಳೂರು: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಸಿ.ಡಿ ಭಯ ಶುರುವಾಗಿದ್ದು, ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್​ನಿಂದ ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ವರದಿ ಮಾಡದಂತೆ ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ಪಡೆದಿದ್ದಾರೆ.

Ad Widget . Ad Widget . Ad Widget .

ಕೇಂದ್ರ ಸಚಿವ ಸಂಪುಟ ಪುನಾರಚನೆ ಸಂದರ್ಭದಲ್ಲಿ ಕೆಲ ಪತ್ರಿಕೆ, ಚಾನಲ್​​ಗಳಲ್ಲಿ ತಮ್ಮ ವಿರುದ್ಧ ಸುಳ್ಳುಸುದ್ದಿ ಪ್ರಸಾರ ಮಾಡುವ ಸಾಧ್ಯತೆ ಇದೆ. ಕಿಡಿಗೇಡಿಗಳು ನಕಲಿ ಸಿ.ಡಿ ಸೃಷ್ಟಿಸಿ ಮಾಧ್ಯಮಗಳಲ್ಲಿ ಹರಿಬಿಡುವ ಸಾಧ್ಯತೆಯೂ ಇದೆ ಎಂದು ಕಾರಣ ನೀಡಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಈ ಕುರಿತು ಕೆಲ ಹಳೆಯ ದೃಷ್ಟಾಂತಗಳ ಉದಾಹರಣೆಯನ್ನೂ ನೀಡಿರುವ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಹಿಂದೆ ಅಮೆರಿಕದ ಅಧ್ಯಕ್ಷರಾಗಿದ್ದ ಬರಾಕ್ ಒಬಾಮಾ, ಬ್ರಿಟನ್ ರಾಣಿ ಕ್ವೀನ್ ಎಲಿಜಬೆತ್ ಕುರಿತು ನಕಲಿ ವಿಡಿಯೋ ಮಾಡಲಾಗಿತ್ತು ಎಂದು ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಇಂಥ ವಿಡಿಯೋ ಪ್ರಸಾರ ಮಾಡಿದರೆ ಘನತೆಗೆ ಧಕ್ಕೆ ಆಗಲಿದೆ. ಅದರಿಂದ ಚಾರಿತ್ರ್ಯ ವಧೆಯಾಗಲಿದೆ. ಆದ್ದರಿಂದ ತಮ್ಮ ಬಗ್ಗೆಯೂ ಇಂತಹ ವಿಡಿಯೋ ಪ್ರಸಾರ ಮಾಡುವ ಅಪಾಯವಿದ್ದು, ಹಾಗಾದಲ್ಲಿ ಘನತೆಗೆ ಧಕ್ಕೆಯಾಗಲಿದೆ. ಚಾರಿತ್ರ್ಯ ವಧೆಯಾಗಲಿದೆ ಎಂದು ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿಯನ್ನು ಮಾನ್ಯ ಮಾಡಿದ ಕೋರ್ಟ್, ಮಾನಹಾನಿಕರ ವರದಿ ಮಾಡದಂತೆ ನಿರ್ಬಂಧ ವಿಧಿಸಿದೆ.

Leave a Comment

Your email address will not be published. Required fields are marked *