ಸಮಗ್ರ ಉದ್ಯೋಗ: Indian Railway Construction Company Limited ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜನರಲ್ ಮ್ಯಾನೇಜರ್/ ಫೈನಾನ್ಸ್ ಹುದ್ದೆ ಖಾಲಿ ಇದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 13, 2023 ಕೊನೆಯ ದಿನವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆ:
ಇಂಡಿಯನ್ ರೈಲ್ವೆ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸಿಎ ಅಥವಾ ICWA ಪೂರ್ಣಗೊಳಿಸಿರಬೇಕು.
ವಯೋಮಿತಿ:
ಇಂಡಿಯನ್ ರೈಲ್ವೆ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಅಕ್ಟೋಬರ್ 31, 2023ಕ್ಕೆ ಗರಿಷ್ಠ 50 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
SC/ST/EWS/PWD/ಮಾಜಿ ಸೈನಿಕ ಅಭ್ಯರ್ಥಿಗಳು: ಅರ್ಜಿ ಶುಲ್ಕ ಇಲ್ಲ.
UR/OBC ಅಭ್ಯರ್ಥಿಗಳು: ರೂ.1000/-
ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್
ವೇತನ:
ಮಾಸಿಕ ₹ 1,00,000- 2,60,000
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಜಂಟಿ ಜನರಲ್ ಮ್ಯಾನೇಜರ್/HRM
IRCON ಇಂಟರ್ನ್ಯಾಷನಲ್ ಲಿಮಿಟೆಡ್
C-4, ಜಿಲ್ಲಾ ಕೇಂದ್ರ, ಸಾಕೇತ್
ನವದೆಹಲಿ – 110017
ಸರ್ಕಾರಿ ನೌಕರಿ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ.