ಜೆಡಿಎಸ್ ಇಬ್ಭಾಗ/ ನೂತನ ರಾಷ್ಟ್ರಾಧ್ಯಕ್ಷರ ನೇಮಕ

ಸಮಗ್ರ ನ್ಯೂಸ್: ಜೆಡಿಎಸ್ ಉಚ್ಛಾಟಿತ ನಾಯಕರು ಜೆಡಿಎಸ್ ಪಕ್ಷವನ್ನು ಇಬ್ಬಾಗವನ್ನಾಗಿ ಮಾಡಿ ತಮ್ಮದೇ ರಾಷ್ಟ್ರಾಧ್ಯಕ್ಷರನ್ನು ನೇಮಕ ಮಾಡಿದ್ದಾರೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾಣು ಅವರನ್ನು ನೇಮಕ ಮಾಡಲಾಗಿದೆ ಎಂದು ಘೋಷಿಸಲಾಯಿತು. ಇಂದು ಸಿ.ಎಂ.ಇಬ್ರಾಹಿಂ ನೇತೃತ್ವದಲ್ಲಿ ಬೆಂಗಳೂರಿನ ಕೆ.ಜಿ.ಹಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸಿದ್ದು, ಸಭೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ ಎಂದು ಘೋಷಿಸಲಾಯಿತು.

. Ad Widget . Ad Widget

ಸಭೆಯ ನಂತರ ಮಾತನಾಡಿದ ಸಿ.ಎಂ.ಇಬ್ರಾಹಿಂ, ಜೆಡಿಎಸ್ ರಾಷ್ಟ್ರೀಯ ಅದ್ಯಕ್ಷರನ್ನಾಗಿ ಸಿ.ಕೆ.ನಾಣು ಅವರನ್ನು ನೇಮಿಸಲಾಗಿದೆ. ಇದು ನನ್ನ ನಿರ್ಣಯವಲ್ಲ, ರಾಷ್ಟ್ರೀಯ ಕೌನ್ಸಿಲ್ ನಿರ್ಣಯವಾಗಿದೆ. ಇದೇ ನಿಜವಾದ ಜೆಡಿಎಸ್. ಈ ಬಗ್ಗೆ ಚುನಾವಣಾ ಆಯೋಗಕ್ಕೂ ಪತ್ರ ಬರೆಯುತ್ತೇವೆ. ನಾವೆಲ್ಲರೂ ನಿತೀಶ್ ಕುಮಾರ್ ಹಾಗೂ ಲಾಲು ಪ್ರಸಾದ್ ಯಾದವ್ ಭೇಟಿಗೆ ತೆರಳುತ್ತಿದ್ದೇವೆ. ಜನವರಿಯಲ್ಲಿ ಹುಬ್ಬಳ್ಳಿಯಲ್ಲಿ ಬೃಹತ್ ಸಮಾವೇಶ ಮಾಡುತ್ತಿದ್ದೇವೆ. ಸಮಾವೇಶಕ್ಕೆ ಅಖಿಲೇಶ್ ಯಾದವ್, ನಿತೀಶ್ ಕುಮಾರ್, ರಾಹುಲ್ ಗಾಂಧಿ ಅವರಿಗೆ ಆಹ್ವಾನ ನೀಡಲಾಗುವುದು ಎಂದು ತಿಳಿಸಿದರು.

. Ad Widget . . Ad Widget . Ad Widget

Leave a Comment

Your email address will not be published. Required fields are marked *