ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಟಿ ಹಿನ್ನಲೆ| ಮದ್ಯದಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಆದೇಶ

ಸಮಗ್ರ ನ್ಯೂಸ್: ರಾಜ್ಯದ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಮಹೋತ್ಸವ ಇದೇ ಡಿಸೆಂಬರ್ 24ರ ವರೆಗೆ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಕ್ಷೇತ್ರದ ಸಮೀಪದ ಮದ್ಯದಂಗಡಿಗಳನ್ನು ಮುಚ್ಚಲು ದ.ಕ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Ad Widget ... ..

ಡಿಸೆಂಬರ್ 16ರಿಂದ 19ರವರೆಗೆ ಮುಖ್ಯ ರಥೋತ್ಸವಗಳು ನಡೆಯಲಿದೆ. ಈ ಸಂದರ್ಭದಲ್ಲಿ ಅಪಾರ ಭಕ್ತಾದಿಗಳು ಸೇರುವುದರಿಂದ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತ ದೃಷ್ಟಿಯಿಂದ ಡಿಸೆಂಬರ್ 17ರಂದು ಬೆಳಿಗ್ಗೆ 6 ಗಂಟೆಯಿಂದ ಡಿಸೆಂಬರ್ 18ರ ಮಧ್ಯರಾತ್ರಿ 12 ಗಂಟೆಯವರೆಗೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಇಂಜಾಡಿ ಬಳಿ ಇರುವ ಪ್ರಶಾಂತ್ ಬಾರ್ ಆ್ಯಂಡ್ ರೆಸ್ಟೋರೆಂಟ್ ಹಾಗೂ ಬೆಳ್ಳಿ ಬಾರ್ ಆ್ಯಂಡ್ ರೆಸ್ಟೋರೆಂಟ್ ಗಳನ್ನು ಮತ್ತು ಎಲ್ಲಾ ವಿವಿಧ ಅಮಲು ಪದಾರ್ಥಗಳ ಮಾರಾಟವನ್ನು ನಿಷೇಧಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಆದೇಶಿಸಿದ್ದಾರೆ.

Ad Widget

Leave a Comment

Your email address will not be published. Required fields are marked *