ಸಮಗ್ರ ನ್ಯೂಸ್: ಸಂಸತ್ ಮೇಲೆ ನಡೆದ ದಾಳಿ ಖಂಡಿಸಿ ವಿಪಕ್ಷಗಳು ಲೋಕಸಭೆಯಲ್ಲಿ ಪ್ರತಿಭಟನೆ ನಡೆಸಿ ಅಶಿಸ್ತು ತೋರಿದ ಹಿನ್ನಲೆಯಲ್ಲಿ 14 ಸಂಸದರನ್ನು ಸ್ಪೀಕರ್ ಅಮಾನತು ಮಾಡಿದ್ದಾರೆ. ಭದ್ರತಾ ಲೋಪದ ಹೊಣೆಹೊತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಸಂಸದರು ಭಾರಿ ಗದ್ದಲ ನಡೆಸಿದ್ದು, ಇದರ ಪರಿಣಾಮವಾಗಿ ಸಂಸದರನ್ನು ಅಮಾನತು ಮಾಡಲಾಗಿದೆ.
ಸ್ಪೀಕರ್ ಎಚ್ಚರಿಕೆ ಲೆಕ್ಕಿಸದೆ ಪ್ರತಿಭಟನೆ ನಡೆಸಿದ ಹಿನ್ನಲೆಯಲ್ಲಿ ಸಂಸದರಾದ ಟಿಎನ್ ಪ್ರತಾಪನ್, ಹಿಬಿ ಇಡನ್, ಎಸ್ ಜ್ಯೋತಿಮಣಿ, ರಮ್ಯಾ ಹರಿದಾಸ್, ಡೀನ್ ಕುರಿಯಾಕೋಸ್, ಬೆನ್ನಿ ಬೆಹನಾನ್, ವಿಕೆ ಶ್ರೀಕಂಠನ್, ಮೊಹಮ್ಮದ್ ಜಾವೇದ್, ಪಿಆರ್ ನಟರಾಜನ್, ಕನ್ನಿಮೊಳಿ ಕರುಣಾನಿಧಿ, ಕೆ ಸುಬ್ರಹ್ಮಮಣ್ಯಂ, ಎಸ್ ಆರ್ ಪ್ರತಿಭನ್, ಎಸ್ ವೆಂಕಟೇಶನ್ ಹಾಗೂ ಮಣಿಕಂ ಠಾಗೋರ್ ಅವರನ್ನು ಅಮಾನತು ಮಾಡಲಾಗಿದೆ.
ಸಂಪೂರ್ಣ ಚಳಿಗಾಲದ ಅಧಿವೇಶನದಿಂದ ಅಮಾನತು ಮಾಡಲಾಗಿದೆ.