ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ಸರ್ಕಾರ| ದೀರ್ಘಾವಧಿ ಹಾಗೂ ಅಲ್ಪಾವಧಿ ಸಾಲದ ಬಡ್ಡಿ ಸಂಪೂರ್ಣ ಮನ್ನಾ

ಸಮಗ್ರ ನ್ಯೂಸ್: ರಾಜ್ಯದ ರೈತರು ಸಹಕಾರ ಬ್ಯಾಂಕುಗಳಲ್ಲಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಲಾಗುವುದು ಎಂದು ನಮ್ಮ ಸರ್ಕಾರ ತೀರ್ಮಾನಿಸಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.

Ad Widget ... ..

ಇಂದು ವಿಧಾನಸಭೆಯಲ್ಲಿ ಮಾತನಾಡಿದ ಅವರು, ಸಹಕಾರ ಬ್ಯಾಂಕುಗಳಲ್ಲಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಲಾಗುವುದು ಎಂದು ನಮ್ಮ ಸರ್ಕಾರ ತೀರ್ಮಾನಿಸಿದೆ. ಇದರಿಂದ ಸಾಲಮನ್ನಾ ಮಾಡುವ ಕುರಿತು ನಾವು ನಮ್ಮ ಮ್ಯಾನಿಫೆಸ್ಟೊದಲ್ಲಿ ಹೇಳಿಲ್ಲ. ಬಿಜೆಪಿಯವರು 2018 ರ ತಮ್ಮ ಮ್ಯಾನಿಫೆಸ್ಟೊದಲ್ಲಿ ” ನಮ್ಮ ಸರಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ರಾಷ್ಟ್ರೀಕೃತ ಬ್ಯಾಂಕು ಮತ್ತು ಸಹಕಾರಿ ಸಂಘಗಳಲ್ಲಿ ಇರುವ 1 ಲಕ್ಷದವರೆಗೆ ರೈತರ ಬೆಳೆ ಸಾಲ ಮನ್ನಾ ಮಾಡಲಾಗುವುದು” ಎಂದು ಹೇಳಿದ್ದರು. ಆದರೆ ಬಿಜೆಪಿಯವರು ಈ ಕುರಿತು ಏನಾದರೂ ಮಾಡಿದರಾ? ನಯಾಪೈಸೆ ಬಿಡುಗಡೆ ಮಾಡಿದರಾ? ಹೇಳಿ ಎಂದು ಪ್ರಶ್ನಿಸಿದರು.

Ad Widget

ಯಡಿಯೂರಪ್ಪನವರು 2019 ರ ಆಗಸ್ಟ್ನಲ್ಲಿ ಅತಿವೃಷ್ಟಿಯ ಕಾರಣಕ್ಕೆ ಬೆಳೆ ಹಾನಿಯಾಗಿತ್ತು. ಆಗ ಶಿವಮೊಗ್ಗದಲ್ಲಿ ಯಡಿಯೂರಪ್ಪನವರು ಏನು ಹೇಳಿದರು ಗೊತ್ತಾ? “ಕೇಳಿದಷ್ಟು ಹಣ ಕೊಡಲು ಸರ್ಕಾರದಲ್ಲಿ ನೋಟ್ ಪ್ರಿಂಟ್ ಮಾಡುವ ಯಂತ್ರವಿಲ್ಲ” ಎಂದು ಹೇಳಿದ್ದರು [ 14-8-2019 – ಶಿವಮೊಗ್ಗ] ಯಡಿಯೂರಪ್ಪನವರು ಈ ರೀತಿ ಹೇಳಿದ್ದು ಇದೇ ಮೊದಲಲ್ಲ ಎಂದರು.

2009 ರಲ್ಲಿ ವಿಧಾನಪರಿಷತ್ತಿನಲ್ಲಿ ನಮ್ಮ ವಿರೋಧ ಪಕ್ಷದ ನಾಯಕರಾಗಿದ್ದ ವಿ ಎಸ್ ಉಗ್ರಪ್ಪ ಮುಂತಾದ ನಮ್ಮ ಪಕ್ಷದವರು ಸಾಲ ಮನ್ನಾ ಮಾಡಿ ಎಂದು ಆಗ್ರಹಿಸಿದ್ದಾಗಲೂ ಯಡಿಯೂರಪ್ಪನವರು ಇದೇ ಮಾತುಗಳನ್ನಾಡಿದ್ದರು. ಯಡಿಯೂರಪ್ಪನವರು ಹೇಳಿದ್ದ ಮಾತುಗಳಿವು, ” ಮತಕ್ಕಾಗಿ ಇತರ ಪಕ್ಷಗಳವರು ಹೇಳಿದಂತೆ ನಾನು ಕೂಡ ರೈತರ ಕೃಷಿ ಮನ್ನಾ ಮಾಡುತ್ತೇನೆಂದು ಚುನಾವಣೆಯ ಸಂದರ್ಭದಲ್ಲಿ ಆಶ್ವಾಸನೆ ನೀಡಿದ್ದೆ. ಆದರೆ ಇದು ಸಾಧ್ಯವಿಲ್ಲ ಎಂಬುದು ಈಗ ಅರ್ಥವಾಗುತ್ತಿದೆ, ಸಾಲ ಮನ್ನಾ ಮಾಡಲು ಹಣ ಎಲ್ಲಿದೆ? ಎಂದು ವಿರೋಧ ಪಕ್ಷದ ಸದಸ್ಯರನ್ನೆ ಪ್ರಶ್ನಿಸಿದ್ದರು. ” ರೈತರ ಸಾಲ ಮನ್ನಾ ಮಾಡಲು ನಾನು ಸಿದ್ಧನಿದ್ದೇನೆ ಎಂದು ತಿಳಿಸಿದರು.

Leave a Comment

Your email address will not be published. Required fields are marked *