ಹೊಸ ವರ್ಷಕ್ಕೆ ರೆಡಿಯಾಯ್ತ ಗೈಡ್ ಲೈನ್ಸ್…

ಸಮಗ್ರ ನ್ಯೂಸ್: ಇನ್ನೆನೂ ಕೆಲವೇ ದಿನಗಳಲ್ಲಿ ಹೊಸ ವರ್ಷ ಸಮೀಪಿಸುತ್ತಿದೆ. ಈ ಹಿನ್ನಲೆ ಬೆಂಗಳೂರು ನಗರ ಪೊಲೀಸರು ಹಾಗೂ ಪಾಲಿಕೆ ಅಲರ್ಟ್ ಆಗಿದ್ದಾರೆ. ಅಹಿತಕರ ಘಟನೆ ನಡೆಯದಂತೆ ಪ್ಲ್ಯಾನಿಂಗ್​ ನಡೆಸಿದ್ದು, ಇಂದು ಪಾಲಿಕೆ ಜೊತೆ ಸಭೆ ನಡೆಸಿ ಪೊಲೀಸರು ಗೈಡ್ ಲೈನ್ಸ್ ರೆಡಿ ಮಾಡಿದ್ದಾರೆ.

Ad Widget ... ..

ನಗರದ ಬ್ರಿಗೇಡ್ ರೋಡ್,ಎಂಜಿ ರೋಡ್ ನಲ್ಲಿ ಹೊಸ ವರ್ಷಾಚರಣೆಗೆ ಹೆಚ್ಚಿನ ಜನ ಸೇರುತ್ತಾರೆ. ಹಾಗಾಗಿ ಪ್ರತಿ ಬಾರಿ ಒಂದಷ್ಟು ಗೊಂದಲ ಮತ್ತು ಅಹಿತಕರ ಘಟನೆ ನಡೆಯುತ್ತದೆ. ಈ ಬಾರಿ ಆ ರೀತಿ ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.

Ad Widget

ಡಿಸೆಂಬರ್ 31ರ ಮಧ್ಯರಾತ್ರಿಯಿಂದಲೇ ರೂಲ್ಸ್ ಅಪ್ಲೈ
ಹೊಸ ವರ್ಷಕ್ಕೆ ಪಾಲಿಕೆ ಹಾಗೂ ಪೊಲೀಸ್ ಇಲಾಖೆಯಿಂದ ಗೈಡ್ ಲೈನ್ಸ್ ರೆಡಿ ಮಾಡಿದ್ದು, ಇದರಿಂದ ಸಿಲಿಕಾನ್ ಸಿಟಿಯಲ್ಲಿ ನ್ಯೂ ಇಯರ್ ಗುಂಗಿನಲ್ಲಿದ್ದವರಿಗೆ ಲಗಾಮು ಬೀಳಲಿದೆ. ಈ ಬಾರೀ ಹೆಚ್ಚು ಸಿಸಿಟಿವಿ ಅಳವಡಿಕೆಗೆ ಪಾಲಿಕೆಗೆ ಸೂಚನೆ ನೀಡಲಾಗಿದೆ. ಅದರಲ್ಲೂ ಈ ಬಾರಿ ಪಾಲಿಕೆ, ಪೊಲೀಸ್ ಇಲಾಖೆ ಜೊತೆ ಕೈಜೋಡಿಸಿ ಕೆಲಸ ಮಾಡುತ್ತಿದೆ. ಪೊಲೀಸ್ ಇಲಾಖೆ ಜೊತೆ ಸಾಥ್ ನೀಡೋದಾಗಿ ಪಾಲಿಕೆ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

ಗೈಡ್ ಲೈನ್ಸ್ ನಲ್ಲಿ ಏನಿದೆ?

  • ರಾತ್ರಿ 1 ಗಂಟೆಯೊಳಗೆ ಹೊಸ ವರ್ಷಾಚರಣೆ ಮುಗಿಸಬೇಕು.
    *ಎಂ.ಜಿ.ರಸ್ತೆ,ಬ್ರಿಗೇಡ್ ರಸ್ತೆ, ಇಂದಿರಾನಗರದಲ್ಲಿ ಆಚರಣೆಗೆ ಅನುಮತಿ.
    *ರಾತ್ರಿ 10 ಗಂಟೆ ಬಳಿಕ ಪ್ರಮುಖ ಫ್ಲೈ ಓವರ್ ಗಳು ಬಂದ್.
    *ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ 200ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಕೆ.
    *ರಾತ್ರಿ 8 ಗಂಟೆ ಬಳಿಕ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್.
    *ಸೆಲೆಬ್ರೇಷನ್ ಗೆ ಬರುವವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ.
    *ಮಹಿಳೆಯರ ಸುರಕ್ಷತೆಗಾಗಿ ಮಹಿಳಾ ಪೊಲೀಸರ ನಿಯೋಜನೆ.
    *ಬಾರ್, ಪಬ್ ಗಳಿಗೂ ರಾತ್ರಿ 1 ಗಂಟೆ ಬಳಿಕ ಬಂದ್ ಗೆ ಸೂಚನೆ.
    *ನಗರದ ವಿವಿಧ ಭಾಗಗಳಲ್ಲಿ ಆಚರಣೆಗೆ ಅನುಮತಿ ಕಡ್ಡಾಯ.

ಇನ್ನೂ ಲೌಡ್ ಸ್ಪೀಕರ್, ಪಟಾಕಿ ಸಿಡಿಸಲು ನಿರ್ಬಂಧ ಹೇರಲಾಗಿದೆ. ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ಸಂಚಾರಕ್ಕೆ ಅನುಮತಿ ನೀಡಿದ್ದಾರೆ. ರಾತ್ರಿ 1 ಗಂಟೆ ತನಕ ನಮ್ಮ ಮೆಟ್ರೋ ಸಂಚಾರವು ಇರುತ್ತದೆ.
ಈ ರೀತಿಯಾಗಿ ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಭರ್ಜರಿ ತಯಾರಿ ನಡೆಸಲಾಗಿದೆ.

Leave a Comment

Your email address will not be published. Required fields are marked *