Ad Widget .

ಕೊಡಗು ಜಿಲ್ಲೆಯಲ್ಲಿ ಕರೋನಾ ನೂತನ ರೂಪಾಂತರಿ ತಳಿಯ ಬಗ್ಗೆ ಮುನ್ನೆಚ್ಚರಿಕೆ ವಹಿಸಿ| ಜಿಲ್ಲಾಡಳಿತಕ್ಕೆ ಸಚಿವ ಎನ್ ಎಸ್‌ ಭೋಸರಾಜು ಸೂಚನೆ

ಸಮಗ್ರ ನ್ಯೂಸ್: ಕೇರಳದಲ್ಲಿ ಕರೋನಾ ರುಪಾಂತರಿ ಜೆಎನ್‌ 1 ಪತ್ತೆಯಾಗಿರುವ ಹಿನ್ನಲೆಯಲ್ಲಿ ಗಡಿ ಜಿಲ್ಲೆಯಾಗಿರುವ ಕೊಡಗಿನಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್‌.ಎಸ್‌.ಭೋಸರಾಜು ಅವರು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಡಿ. 18ರಂದು ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ ಜಿಲ್ಲೆಯ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಸಮಗ್ರ ಮಾಹಿತಿಯನ್ನು ಪಡೆದುಕೊಂಡರು. ಕೊಡಗು ಜಿಲ್ಲೆಗೆ ಗಡಿ ಹೊಂದಿಕೊಂಡಿರುವ ಕೇರಳ ರಾಜ್ಯದಲ್ಲಿ ರೂಪಾಂತರಿ ಕರೋನಾ ಪತ್ತೆಯಾಗಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಬೇಕು. ಜಿಲ್ಲೆಯ ಆರೋಗ್ಯ ಇಲಾಖೆಯು ಸನ್ನದ್ದವಾಗಿದ್ದು ಎಲ್ಲಾ ರೀತಿಯ ಪರಿಸ್ಥಿತಿಗಳನ್ನ ನಿಭಾಯಿಸಲು ಸಜ್ಜಾಗಿರಬೇಕು. ಜನ ಸಾಮಾನ್ಯರಿಗೆ ಯಾವುದೇ ತೊಂದರೆ ಆಗದಂತೆಯೂ ಕ್ರಮಗಳನ್ನ ಕೈಗೊಳ್ಳಬೇಕು. ಕರೋನಾ ಪ್ರಕರಣಗಳು ಕಂಡುಬಂದಲ್ಲಿ ನಿಯಮಾನುಸಾರ ಅಗತ್ಯ ಚಿಕಿತ್ಸೆಯನ್ನು ಹಾಗೂ ಇನ್ನುಳಿದ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಬೇಕು.

Ad Widget . Ad Widget . Ad Widget .

ಹೊಸ ವರ್ಷಾಚರಣೆಯ ಹಿನ್ನಲೆಯಲ್ಲಿ ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುವ ನಿರೀಕ್ಷೆಯಿದೆ. ಈ ಹಿನ್ನಲೆಯಲ್ಲಿ ಈಗಿನಿಂದಲೇ ಅಗತ್ಯ ವ್ಯವಸ್ಥೆಗಳನ್ನ ಹಾಗೂ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆ.

Leave a Comment

Your email address will not be published. Required fields are marked *