ಸಮಗ್ರ ನ್ಯೂಸ್: ಕಳೆದ ವಾರ ಸಂಸತ್ತಿನಲ್ಲಿ ನಡೆದ ಭಾರೀ ಭದ್ರತಾ ವೈಫಲ್ಯದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸದನವನ್ನು ಉದ್ದೇಶಿಸಿ ಮಾತನಾಡಬೇಕೆಂದು ಒತ್ತಾಯಿಸಿ ರಾಜ್ಯಸಭೆ, ಲೋಕಸಭೆಯಲ್ಲಿ ಪ್ರತಿಭಟನೆ ನಡೆಸಿದ ಒಟ್ಟು 90 ಪ್ರತಿಪಕ್ಷ ಸಂಸದರನ್ನು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಸಂಸತ್‌ನಿಂದ ಅಮಾನತು ಮಾಡಲಾಗಿದೆ.
ಗೃಹ ಸಚಿವರ ಹೇಳಿಕೆಗೆ ಒತ್ತಾಯಿಸಿದ 13 ವಿರೋಧ ಪಕ್ಷದ ಸಂಸದರನ್ನು ಕಳೆದ ವಾರ ಅಮಾನತು ಮಾಡಲಾಗಿತ್ತು. ಇಂದು ಲೋಕಸಭೆಯಿಂದ 31 ಸಂಸದರನ್ನು ಅಮಾನತುಗೊಳಿಸಲಾಗಿತ್ತು. ಈಗ 46 ರಾಜ್ಯಸಭಾ ಸಂಸದರನ್ನು ಅಮಾನತು ಮಾಡಲಾಗಿದೆ. ಇದುವರೆಗೆ ಒಟ್ಟು 90 ಸಂಸದರನ್ನು ಸಂಸತ್‌ನಿಂದ ಅಮಾನತು ಮಾಡಲಾಗಿದೆ.
ಇದುವರೆಗಿನ ಸಂಸತ್ ಇತಿಹಾಸದಲ್ಲೇ ಅತಿ ದೊಡ್ಡ ಅಮಾನತು ಘಟನೆ ಇದಾಗಿದ್ದು, ಪ್ರತಿಪಕ್ಷಗಳು ಈ ಘಟನೆಯನ್ನು ಖಂಡಿಸಿವೆ.