ಮೂರು ತಿಂಗಳ ಒಳಗಡೆ ವನ್ಯಜೀವಿ ವಸ್ತುಗಳನ್ನು ಸರ್ಕಾರಕ್ಕೆ ಮರಳಿಸಿ/ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ

ಸಮಗ್ರ ನ್ಯೂಸ್: ಮುಂದಿನ ಮೂರು ತಿಂಗಳ ಒಳಗಡೆ ವನ್ಯಜೀವಿ ವಸ್ತುಗಳನ್ನು ಸರ್ಕಾರಕ್ಕೆ ಮರಳಿಸಬೇಕೆಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

Ad Widget ... ..

ವಿಕಾಸಸೌಧದಲ್ಲಿ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ವನ್ಯಜೀವಿ ವಸ್ತು ವಾಪಸ್ ಕೊಡಲು ಕೊನೇ ಅವಕಾಶ ಕೊಡಲು ತೀರ್ಮಾನ ಮಾಡಲಾಗಿದೆ. ಪ್ರಾಣಿ ಅಂಗಾಂಗ ಹಿಂತಿರುಗಿಸಲು 3 ತಿಂಗಳು ಸಮಯ ಕೊಡಲು ತೀರ್ಮಾನ ಆಗಿದೆ. ಕಾನೂನು ಇಲಾಖೆ ಕೂಡಾ ಇದಕ್ಕೆ ಒಪ್ಪಿಗೆ ನೀಡಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.

Ad Widget

ಯಾವುದೇ ಅಂಗಾಂಗ ಇದ್ದರೂ ಜನರು ವಾಪಸ್ ಕೊಡಬೇಕು. 1978 ಹಿಂದಿನಿಂದ ಪ್ರಾಣಿ ಅಂಗಾಂಗ ಇರೋರಿಗೆ ಈ ಅವಕಾಶ ಕೊಡಲಾಗಿದೆ. ಅಂಗಾಗ ವಾಪಸ್ ಮಾಡಿದರೆ ಕೇಸ್ ಹಾಕಲ್ಲ ಎಂದು ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ

Leave a Comment

Your email address will not be published. Required fields are marked *