ಮತ್ತೆ ಕಾವೇರಿಸುತ್ತಿರುವ ಕಾವೇರಿ/ ಡಿಸೆಂಬರ್ ಅಂತ್ಯದವರಿಗೆ 1030 ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ

ಸಮಗ್ರ ನ್ಯೂಸ್: ಡಿಸೆಂಬರ್ ಅಂತ್ಯದವರಿಗೆ ತಮಿಳುನಾಡಿಗೆ 1030 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿದೆ. ತಮಿಳುನಾಡಿನಲ್ಲಿ ಕಳೆದ 15 ದಿನಗಳಿಂದಲೂ ಈಶಾನ್ಯ ಮಾನ್ಸೂನ್ ಮಾರುತದಿಂದ ಭಾರಿ ಮಳೆಯಾಗುತ್ತಿದ್ದು, ಪ್ರವಾಹವೇ ಸೃಷ್ಟಿಯಾಗಿದೆ. ಇದರ ನಡುವೆ ತಮಿಳುನಾಡಿಗೆ ಡಿಸೆಂಬರ್ ಅಂತ್ಯದವರಿಗೆ 1030 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಹೊರಡಿಸಿದೆ.

Ad Widget ... ..

ತಮಿಳುನಾಡಿಗೆ ನೀರು ಹರಿಸಲು ಸಾಧ್ಯವೇ ಇಲ್ಲ ಎಂದು ರಾಜ್ಯದ ಪರ ಅಧಿಕಾರಿಗಳು ಹಲವು ಬಾರಿ ವಾದ ಮಂಡಿಸುತ್ತಲೇ ಇದ್ದರೂ, ಮತ್ತೆ ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಹಿನ್ನಡೆಯಾಗಿದೆ.

Ad Widget

Leave a Comment

Your email address will not be published. Required fields are marked *