ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಪ್ರಕಟ/ ಶಮಿಗೆ ಒಲಿದ ಅರ್ಜುನ ಪ್ರಶಸ್ತಿ,

ಸಮಗ್ರ ನ್ಯೂಸ್: 2023ನೇ ಸಾಲಿನ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಯನ್ನು ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ಪ್ರಕಟಿಸಿದ್ದು, ಕ್ರಿಕೆಟಿಗ ಮೊಹಮ್ಮದ್ ಶಮಿ ಸೇರಿದಂತೆ 26 ಕ್ರೀಡಾಪಟುಗಳಿಗೆ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

Ad Widget ... ..

ಇತ್ತೀಚೆಗಷ್ಟೇ ಮುಕ್ತಾಯವಾದ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಶಮಿ ಅವರ ಕೊಡುಗೆಯನ್ನು ಗಮನದಲ್ಲಿಟ್ಟಕೊಂಡು ಅರ್ಜುನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

Ad Widget

2024ರ ಜನವರಿ 9ರಂದು ರಾಷ್ಟ್ರಪತಿ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಪ್ರಶಸ್ತಿ ವಿಜೇತ ಕ್ರೀಡಾಪಟುಗಳಿಗೆ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ.

Leave a Comment

Your email address will not be published. Required fields are marked *