ಸುಳ್ಯ: ಅಯ್ಯಪ್ಪ ಮಾಲಾಧಾರಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಅಯ್ಯಪ್ಪ ಮಾಲಾಧಾರಿಯೊಬ್ಬರು ತನ್ನ ಆಶ್ರಮದಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದಾರೆ.

. Ad Widget . Ad Widget

ಘಟನೆ ತಾಲೂಕಿನ ಮರ್ಕಂಜ ಗ್ರಾಮದ ಸೇವಾಜೆ ಎಂಬಲ್ಲಿ ನಡೆದಿದ್ದು, ಇಲ್ಲಿನ ಹೊನ್ನಪ್ಪ ದೇವ ಎಂಬವರ ಪುತ್ರ ಪದ್ಮನಾಭ (30 ವ) ಎಂಬವರೇ ಮೃತ ದುರ್ದೈವಿ

. Ad Widget . . Ad Widget . Ad Widget

ಅವರು ಸೇವಾಜೆ ಬಳಿಯ ಆಶ್ರಮದಲ್ಲಿ ಅಯ್ಯಪ್ಪ ಮಾಲೆ ಧರಿಸಿ ವೃತಚಾರಣೆಯಲ್ಲಿದ್ದು, ಇಂದು ಆಶ್ರಮದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಶವವನ್ನು ಪೊಲೀಸ್ ಮಹಜರು ಬಳಿಕ ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಕೌಟುಂಬಿಕ ಸಮಸ್ಯೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪ್ರಾಥಮಿಕ ಮಾಹಿತಿ ಲಭಿಸಿದೆ. ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *