ಸಮಗ್ರ ನ್ಯೂಸ್: ಕೇಂದ್ರ ಗೃಹ ಸಚಿವಾಲಯದ ಆಡಳಿತಕ್ಕೆ ಒಳಪಡುವ ಗುಪ್ತಚರ ದಳದಲ್ಲಿ : 226 ಇಂಟೆಲಿಜೆನ್ಸ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, Pಅರ್ಹ ಅಭ್ಯರ್ಥಿಗಳು 12.01.2024ರ ಒಳಗೆ ಅರ್ಜಿ ಸಲ್ಲಿಸಬಹುದು.
ಹುದ್ದೆಗೆ ಸಂಬಂಧಿತ ವಿಷಯದಲ್ಲಿ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಬಿಇ/ಬಿ.ಟೆಕ್ ಹಾಗೂ ಕಂಪ್ಯೂಟರ್ ಅಪ್ಲಿಕೇಷನ್ಸ್/ಎಲೆಕ್ಟ್ರಾನಿಕ್ಸ್/ಫಿಸಿಕ್ಸ್‍ನಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವವರು ಅರ್ಜಿ ಸಲ್ಲಿಸಬಹುದು. ಜತೆಗೆ 2021/22/23ರ ಗೇಟ್ ಪರೀಕ್ಷೆಯಲ್ಲಿ ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯೂನಿಕೇಷನ್ಸ್/ ಕಂಪ್ಯೂಟರ್ ಸೈನ್ಸ್ ಆಂಡ್ ಇನ್ಫಾರ್ಮೆಷನ್ ಟೆಕ್ನಾಲಜಿ ವಿಷಯದಲ್ಲಿ ತೇರ್ಗಡೆಯಾಗಿರುವವರು ಅರ್ಜಿ ಸಲ್ಲಿಸಲು ಅರ್ಹರು.
ಕನಿಷ್ಠ 18 ವರ್ಷ 2024 ಜನವರಿ 12ಕ್ಕೆ 27 ವರ್ಷ ಮೀರದವರು ಅರ್ಜಿ ಸಲ್ಲಿಸಬಹುದು. ಸಾಮಾನ್ಯ/ಒಬಿಸಿ/ಆರ್ಥಿಕವಾಗಿ ಹಿಂದುಳಿದ ವರ್ಗದ ಪುರುಷ ಅಭ್ಯರ್ಥಿಗಳು 100ರೂ. ಅರ್ಜಿ ಶುಲ್ಕ ಪಾವತಿಸಬೇಕಿದ್ದು, 100ರೂ. ಪೆÇ್ರಸೆಸ್ಸಿಂಗ್ ಶುಲ್ಕ ಎಲ್ಲ ವರ್ಗದವರಿಗೂ ಅನ್ವಯವಾಗಲಿದೆ.
2021/22/23ರಲ್ಲಿ ನಡೆದ ಗೇಟ್ ಪರೀಕ್ಷೆಯಲ್ಲಿ ಅಭ್ಯರ್ಥಿಯು ಗಳಿಸಿರುವ ಅಂಕದ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ, ನೇರ ಸಂದರ್ಶನಕ್ಕೆ ಆಹ್ವಾನಿಸಲಾಗುವುದು. ಗೇಟ್ ಸ್ಕೋರ್ 1000ಕ್ಕೆ ನಿಗದಿಯಾಗಿದ್ದು, ಸಂದರ್ಶನಕ್ಕೆ 175 ಅಂಕ ನಿಯೋಜಿಸಲಾಗಿದೆ.
http://www.mha.gov.in ಮುಖೇನ ಅರ್ಜಿ ಸಲ್ಲಿಸಬಹುದು.