ಹಿಜಾಬ್ ನಿಷೇಧ ವಾಪಸ್/ ಸಿದ್ದರಾಮಯ್ಯ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಹಿಜಾಬ್ ನಿಷೇಧ ವಾಪಸ್ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಘೋಷಣೆ ಮಾಡಿದ್ದಾರೆ. ಬಿಜೆಪಿ ಸರ್ಕಾರ ಹಿಜಾಬ್ ನಿಷೇಧಿಸಿದ್ದು, ಅದನ್ನು ವಾಪಸ್ ಪಡೆಯಲಾಗುವುದು. ಹಿಜಾಬ್ ನಿಷೇಧ ವಾಪಸ್‍ಗೆ ತಿಳಿಸಿದ್ದೇನೆ ಎಂದು ಸಿಎಂ ತಿಳಿಸಿದರು.

Ad Widget ... ..

ಉಡುಪು ಅವರವರ ಇಷ್ಟ. ಪ್ರಧಾನಿ ಮೋದಿ ಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎನ್ನುವುದು ಬೋಗಸ್. ಬಟ್ಟೆ, ಉಡುಪು, ಜಾತಿ ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ನಾವು ಅಂತಹ ಕೆಲಸ ಮಾಡುವುದಿಲ್ಲ ಎಂದು ಹೇಳಿದ್ದಾರೆ.

Ad Widget

ಹಿಜಾಬ್ ನಿಷೇಧದ ಆದೇಶ ವಾಪಸ್ ಪಡೆಯುತ್ತೇವೆ. ಹಿಜಾಬ್ ಧರಿಸಿ ಶಾಲಾ- ಕಾಲೇಜುಗಳಿಗೆ, ಪರೀಕ್ಷೆ ಬರೆಯಲು ಹೋಗಬಹುದು ಎಂದು ಸಿದ್ದರಾಮಯ್ಯ ತಿಳಿಸಿದರು.

Leave a Comment

Your email address will not be published. Required fields are marked *