ಕೊಬ್ಬರಿ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ…!

ಸಮಗ್ರ ನ್ಯೂಸ್: ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ ಏರಿಕೆ ಮಾಡಿದೆ. ಈ ಕುರಿತಂತೆ ವಿಧಾನಸಭೆಯಲ್ಲೂ ಸಾಕಷ್ಟು ಬಾರಿ ಚರ್ಚೆ ನಡೆದಿತ್ತು. ಮೊನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿಯವರನ್ನ ಜೆಡಿಎಸ್ ನಿಯೋಗ ಭೇಟಿ ಮಾಡಿ ಮನವಿ ಮಾಡಿತ್ತು.

Ad Widget ... ..

ಅದರಂತೆ ಕೇಂದ್ರ ಸರ್ಕಾರ, ಪ್ರತಿ ಕ್ವಿಂಟಾಲ್‌ ಕೊಬ್ಬರಿಗೆ 300 ರೂಪಾಯಿ ಏರಿಕೆ ಮಾಡಿದೆ. ಕೇಂದ್ರ ಸರ್ಕಾರದ ಕ್ರಮವನ್ನ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಸ್ವಾಗತಿಸಿದ್ದು, Xನಲ್ಲಿ ಪೋಸ್ಟ್ ಮಾಡಿ ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ್ದಾರೆ.

Ad Widget

ಕೊಬ್ಬರಿ ಬೆಲೆ ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ತೀರ್ಮಾನ ಮಾಡಿದ್ದು, ಕ್ವಿಂಟಾಲ್‌ ಕೊಬ್ಬರಿಗೆ 300 ರೂಪಾಯಿ, ಉಂಡೆ ಕೊಬ್ಬರಿಗೆ ಎಂಎಸ್‌ಪಿ ದರ 250 ರೂಪಾಯಿ ಹೆಚ್ಚಳ ಮಾಡಲಾಗಿದೆ

ಎಂಎಸ್​​ಪಿ ಹೆಚ್ಚಳದಿಂದ ತೆಂಗು ಬೆಳೆಗಾರರಿಗೆ ಉತ್ತಮ ಆದಾಯವನ್ನು ಲಭಿಸುತ್ತದೆ. ಅಲ್ಲದೇ ದೇಶೀಯವಾಗಿ ಮತ್ತು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೆಂಗಿನ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಕೊಬ್ಬರಿ ಉತ್ಪಾದನೆಯನ್ನು ವಿಸ್ತರಿಸಲು ರೈತರನ್ನು ಉತ್ತೇಜಿಸುತ್ತದೆ ಎಂದು ಕೇಂದ್ರ ತಿಳಿಸಿದೆ.

ಕೇಂದ್ರ ಸಚಿವ ಸಂಪುಟದಲ್ಲಿ 2024ರಲ್ಲಿ ಪ್ರತಿ ಕ್ವಿಂಟಲ್‌ಗೆ ₹11,160 ಮತ್ತು ಚೆಂಡು ಕೊಬ್ಬರಿಗೆ ₹12,000 ಕ್ಕೆ ಎಮ್‌ಎಸ್‌ಪಿಯನ್ನು ನಿಗದಿಪಡಿಸಿದೆ. ಹೊಸ MSP ದರ ಹಿಂದಿನ ವರ್ಷಕ್ಕಿಂತ ಮಿಲ್ಲಿಂಗ್ ಕೊಬ್ಬರಿಗೆ ಪ್ರತಿ ಕ್ವಿಂಟಲ್‌ಗೆ ₹300 ಮತ್ತು ಚೆಂಡು ಕೊಬ್ಬರಿಗೆ ₹250 ಹೆಚ್ಚಳ ಆಗಿದೆ.

Leave a Comment

Your email address will not be published. Required fields are marked *