ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 8 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಶ್ರೀಲಂಕಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಇಂದಿನಿಂದ ನಾಲ್ಕು ದಿನ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯಾದ್ಯಂತ ಇಂದಿನಿಂದ ಮಳೆಯ ಪ್ರಮಾಣ ಏರಿಕೆಯಾಗಲಿದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಜುಲೈ 7 ಮತ್ತು 8 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.
ಇನ್ನು ಕರಾವಳಿ ಜಿಲ್ಲೆಗಳಲ್ಲಿ ನಾಲ್ಕೈದು ದಿನ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನೆರಡು ದಿನ ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆ ಇದೆ.