ಸಮಗ್ರ ಉದ್ಯೋಗ: ಇನ್‌ಸ್ಟಿಟ್ಯೂಟ್ ಫಾರ್ ಸ್ಟೆಮ್ ಸೆಲ್ ಬಯಾಲಜಿ ಮತ್ತು ರಿಜೆನೆರೇಟಿವ್ ಮೆಡಿಸಿನ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4 ಪ್ರೊಫೆಸರ್/ ಇನ್ವೆಸ್ಟಿಗೇಟರ್ (ಸೈಂಟಿಸ್ಟ್-ಜಿ) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 4, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಶೈಕ್ಷಣಿಕ ಅರ್ಹತೆ:
ಇನ್‌ಸ್ಟಿಟ್ಯೂಟ್ ಫಾರ್ ಸ್ಟೆಮ್ ಸೆಲ್ ಬಯಾಲಜಿ ಮತ್ತು ರಿಜೆನೆರೇಟಿವ್ ಮೆಡಿಸಿನ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಲೈಫ್ ಸೈನ್ಸಸ್/ ಇತರೆ ಅಲೈಡ್ ಸೈನ್ಸಸ್ನಲ್ಲಿ ಪಿಎಚ್.ಡಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಇನ್‌ಸ್ಟಿಟ್ಯೂಟ್ ಫಾರ್ ಸ್ಟೆಮ್ ಸೆಲ್ ಬಯಾಲಜಿ ಮತ್ತು ರಿಜೆನೆರೇಟಿವ್ ಮೆಡಿಸಿನ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 55 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ (NCL) ಅಭ್ಯರ್ಥಿಗಳು- 3 ವರ್ಷ
ಅರ್ಜಿ ಶುಲ್ಕ:
SC/ST/ಮಹಿಳೆ ಮತ್ತು ಅಂಗವಿಕಲ ಅಭ್ಯರ್ಥಿಗಳು: Nil
UR/OBC ಅಭ್ಯರ್ಥಿಗಳು: ರೂ.1770/-
ಪಾವತಿ ವಿಧಾನ: ಆನ್‌ಲೈನ್
ವೇತನ:
ಮಾಸಿಕ ₹ 1,44,200
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.
https://www.instem.res.in/facultypositions/
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.