ಸಮಗ್ರ ಉದ್ಯೋಗ: ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರಾಜೆಕ್ಟ್ ಟೆಕ್ನಿಕಲ್ ಸಪೋರ್ಟ್-III ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 4 2024 ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು.
ಶೈಕ್ಷಣಿಕ ಅರ್ಹತೆ:
ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಯೋಟೆಕ್ನಾಲಜಿ/ ಮೆಡಿಕಲ್ ಮೈಕ್ರೋಬಯಾಲಜಿ/ ಲೈಫ್ ಸೈನ್ಸಸ್ ವಿಭಾಗದಲ್ಲಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹ 35,560 ರೂ.
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಸಂದರ್ಶನ ನಡೆಯುವ ಸ್ಥಳ:
ಶೈಕ್ಷಣಿಕ ಬ್ಲಾಕ್
ESIC MC PGIMSR & MH
ರಾಜಾಜಿನಗರ
ಬೆಂಗಳೂರು-560010
ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.