Ad Widget .

22 ರಂದು ಗೋಧ್ರಾ ರೀತಿಯ ಅಪಾಯ ಸಂಭವಿಸುವ ಮಾಹಿತಿ ಇದೆ, ಅಯೋಧ್ಯ ಯಾತ್ರಿಗಳಿಗೆ ಸರ್ಕಾರ ರಕ್ಷಣೆ ನೀಡಿ: ಬಿ.ಕೆ ಹರಿಪ್ರಸಾದ್ ಸ್ಪೋಟಕ ಹೇಳಿಕೆ

ಸಮಗ್ರ ನ್ಯೂಸ್: ರಾಜ್ಯ ರಾಜಕೀಯದಲ್ಲಿ ಈಗ ಸ್ಪೋಟಕ ಹೇಳಿಕೆಯೊಂದು ಎಲ್ಲರಲ್ಲಿ ಸಂಶಯ ಮೂಡುವಂತೆ ಮಾಡಿದೆ. ಜನವರಿ 22ರಂದು ಅಯೋಧ್ಯೆಗೆ ತೆರಳುವವರಿಗೆ ಸರ್ಕಾರ ರಕ್ಷಣೆ ನೀಡಬೇಕು. ಗೋಧ್ರಾ ದುರಂತದ ರೀತಿ ಮತ್ತೆ ಅಪಾಯ ಸಂಭವಿಸುವ ಮಾಹಿತಿ ಇದೆ. ನಮಗೆ ಮಾಹಿತಿ ಸಿಗುತ್ತಿದೆ. ಹೀಗಾಗಿ ಅಯೋಧ್ಯೆಗೆ ತೆರಳುವವರಿಗೆ ರಕ್ಷಣೆ ಒದಗಿಸುವ ಕೆಲಸ ಆಗಬೇಕು ಎಂದು ಕಾಂಗ್ರೆಸ್ ಮುಖಂಡ, ಎಂಎಲ್​ಸಿ ಬಿ.ಕೆ.ಹರಿಪ್ರಸಾದ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮ ಧಾರ್ಮಿಕ ಕಾರ್ಯಕ್ರಮವಲ್ಲ ಇದೊಂದು ರಾಜಕೀಯ ಕಾರ್ಯಕ್ರಮ ಎಂದರು. ಧಾರ್ಮಿಕ ಕಾರ್ಯಕ್ರಮ ಆಗಿದ್ದರೆ ಧಾರ್ಮಿಕ ಮುಖಂಡರು ಭಾಗಿ ಆಗಬೇಕಿತ್ತು. ಶಂಕರಾಚಾರ್ಯರು ಮೂಲ ಗುರುಗಳು. ಅವರ ರೀತಿ ಯಾವುದೇ ಧರ್ಮ ಗುರುಗಳು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟಿದ್ದರೇ ಅದು ಧಾರ್ಮಿಕ ಕಾರ್ಯಕ್ರಮ ಆಗುತ್ತಿತ್ತು. ಆಗ ನಾವು ಆಮಂತ್ರಣ ಇಲ್ಲದೆಯೇ ಉದ್ಘಾಟನೆಗೆ ಹೋಗುತ್ತಿದ್ದೇವು. ಆದರೆ ಈಗ ನಡೆಯುತ್ತಿರುವುದು ರಾಜಕೀಯ ಕಾರ್ಯಕ್ರಮ. ಪ್ರಧಾನಿ ನರೇಂದ್ರ ಮೋದಿ, ಅಮಿತ್​ ಶಾ ಉದ್ಘಾಟನೆಗೆ ಬರುತ್ತಿದ್ದಾರೆ. ಅವರೇನು ಧರ್ಮ ಗುರುಗಳಾ ಇದು ರಾಜಕೀಯ ಕಾರ್ಯಕ್ರಮ. ಅವರ ಧರ್ಮ ಯಾವುದು ಅಂತ ಗೊತ್ತಾಗಿಲ್ಲ ಎಂದು ಹೇಳಿದರು.

Ad Widget . Ad Widget . Ad Widget .

ಬಿಕೆ ಹರಿಪ್ರಸಾದ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ಮುಖಂಡರು ಈ ರೀತಿ ಹೇಳಿಕೆ ನೀಡುವುದು ತಪ್ಪು. ಒಂದು ವೇಳೆ ಆ ರೀತಿಯ ಘಟನೆಗಳ ಮಾಹಿತಿ ಇದ್ರೆ ಪೊಲೀಸ್ ಕಮಿಷನರ್​ ಅವರಿಗೆ ಮಾಹಿತಿ ನೀಡಬೇಕು. ಇದು ದೇಶದ ರಕ್ಷಣೆಗೆ ಸಂಬಂಧಿಸಿದ ವಿಷಯವಾಗಿದೆ. ರಾಜ್ಯ ಸರ್ಕಾರ ಸುಮೋಟೋ ತೆಗೆದುಕೊಂಡು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

Leave a Comment

Your email address will not be published. Required fields are marked *