ದ ಕ: ಖಾಸಗಿ ಬಸ್ ದರ ಏರಿಕೆಗೆ ಜಿಲ್ಲಾಧಿಕಾರಿ ತಡೆ

ಮಂಗಳೂರು: ಜಿಲ್ಲೆಯಲ್ಲಿ ಏರಿಕೆಯಾಗಿದ್ದ ಖಾಸಗಿ ಬಸ್ ಪ್ರಯಾಣ ದರವನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ತಾತ್ಕಾಲಿಕ ತಡೆ ಹಿಡಿದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘವು ಪ್ರಯಾಣದರವನ್ನು ಏರಿಕೆ ಮಾಡಿದ್ದವು. ಕೋವಿಡ್ ಕಾರಣದಿಂದ ಪ್ರಯಾಣಿಕರಿಗೆ ಹೇರಲಾದ ಮಿತಿ ಮತ್ತು ಡೀಸೆಲ್ ಬೆಲೆ ಏರಿಕೆ ಇದಕ್ಕೆ ಕಾರಣವಾಗಿತ್ತು.

. Ad Widget . Ad Widget . Ad Widget

ಬಸ್ ಮಾಲೀಕರ ಸಂಘದ ಪ್ರತಿನಿಧಿಗಳ ಜೊತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸಭೆ ನಡೆ ಸಿದ ಬಳಿಕ ಈ ಮಾಹಿತಿ ನೀಡಿದ್ದಾರೆ. ಲಾಕ್‌ಡೌನ್‌ಗೂ ಮುನ್ನ ಜಾರಿಯಲ್ಲಿದ್ದ ಪ್ರಯಾಣ ದರವನ್ನು ತೆಗೆದುಕೊಳ್ಳಬೇಕು ಎಂದು ಮಾಲೀಕರಿಗೆ ಸೂಚಿಸಲಾಗಿದೆ. ಬಸ್ ಮಾಲೀಕರು ಇದಕ್ಕೆ ಒಪ್ಪಿಗೆ ನೀಡಿದ್ದಾರೆ.

. Ad Widget .

ದರ ಏರಿಕೆಗೆ ಸಂಬಂಧಿಸಿ ಈ ವಾರದೊಳಗೆ ಸಾರಿಗೆ ಪ್ರಾಧಿಕಾರದ ಸಭೆ ನಡೆಸಲಾಗುವುದು. ಆ ಸಭೆಯಲ್ಲಿ ದರ ಏರಿಸಬೇಕೇ ಅಥವಾ ಬೇಡವೇ ಎಂಬುದರ ಬಗ್ಗೆ ತೀರ್ಮಾನಿಸಲಾಗುವುದು. ಆವರೆಗೂ ಹೊಸ ಪ್ರಯಾಣ ದರ ಇಲ್ಲ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಸ್ಪಷ್ಟಪಡಿಸಿದ್ದಾರೆ.

Leave a Comment

Your email address will not be published. Required fields are marked *