ಸಮಗ್ರ ನ್ಯೂಸ್: ಗ್ರಾಮೀಣ ಜನತೆ ತಮಗೆ ಅವಶ್ಯಕತೆ ಇರುವ ಜಾತಿ, ಆದಾಯ, ವಾಸಸ್ಥಳ ಸೇರಿದಂತೆ ಪ್ರಮುಖ 44 ಸೇವೆಗಳು ಇನ್ನು ಮುಂದೆ ಗ್ರಾಮ ಪಂಚಾಯಿತಿಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರದಲ್ಲಿ ಪಡೆದುಕೊಳ್ಳುವಂತೆ ಸರ್ಕಾರ ತೀರ್ಮಾನ ತೆಗೆದುಕೊಂಡು ಆದೇಶವನ್ನು ಹೊರಡಿಸಿದೆ.
ಈ ಹಿಂದೆ ನಾಡಕಚೇರಿಗಳಲ್ಲಿ ಈ ವ್ಯವಸ್ಥೆ ಕಲ್ಪಿಸಲಾಗಿತ್ತು ಇದೀಗ ಬಹುತೇಕ ಎಲ್ಲಾ ಸೇವೆಗಳನ್ನು ಗ್ರಾಮ ಪಂಚಾಯಿತಿಯಲ್ಲಿರುವ ಬಾಪೂಜಿ ಸೇವ ಕೇಂದ್ರದಲ್ಲಿ ಲಭ್ಯವಾಗಲಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ತಂತ್ರಾಂಶ 2.0 ತಂತ್ರಾಂಶವನ್ನು ನಾಡಕಛೇರಿ ತಂತ್ರಾಂಶದೊಂದಿಗೆ ಸಂಯೋಜನೆ ಮಾಡಲಾಗಿದೆ. ಇನ್ನು ಮುಂದೆ ಸಾರ್ವಜನಿಕರು 44 ಸೇವೆಗಳನ್ನ ಗ್ರಾಮ ಪಂಚಾಯಿತಿಗಳಲ್ಲಿ ಅರ್ಜಿ ಸಲ್ಲಿಸಿ ಅಲ್ಲಿಂದಲೇ ಪಡೆದುಕೊಳ್ಳುವಂತೆ ಕರ್ನಾಟಕ ಸಚಿವಾಲಯದ ಆದೇಶದಲ್ಲಿ ಕೋರಿಕೊಂಡಿದೆ.