ರಾಮ ಮಂದಿರ ಉದ್ಘಾಟನೆ/ ಡಿಕೆಶಿಗೆ ಇಲ್ಲ ಆಹ್ವಾನ

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಉದ್ಘಾಟನೆ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ನೀಡಿಲ್ಲ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

Ad Widget ... ..

ಬೆಂಗಳೂರು ನಗರದಲ್ಲಿ ಮಾತನಾಡಿದ ಅವರು, ರಾಮ ಮಂದಿರ ಉದ್ಘಾಟನೆಗೆ ನನ್ನನ್ನು ಆಹ್ವಾನಿಸಿಲ್ಲ. ಮುಖ್ಯಮಂತ್ರಿಗಳನ್ನ ಸಹ ಕರೆದಿಲ್ಲ. ನಾನು ಶಿವ ಭಕ್ತ, ಎಲ್ಲ ದೇವರುಗಳು ನನ್ನ ಹೃದಯದಲ್ಲಿದೆ. ನಮ್ಮ ಅಕ್ಕಿಯನ್ನ ಮಂತ್ರಾಕ್ಷತೆಗೆ ಉಪಯೋಗಿಸಿಕೊಳ್ತಿದ್ದಾರೆ, ಅನ್ನಭಾಗ್ಯ ಯೋಜನೆ ಅಕ್ಕಿ ಬಳಸ್ತಿದ್ದಾರೆ ಎಂದರು.

Ad Widget

ಅರಿಶಿನ ಅಕ್ಕಿ ಸೇರಿಯೇ ಮಂತ್ರಾಕ್ಷತೆ. ನಮ್ಮ ಅನ್ನಭಾಗ್ಯ ಯೋಜನೆಯಿಂದಲೇ ಅಕ್ಷತೆ ಆಗುತ್ತಿದೆ. ಇದು ಸಂತಸದ ವಿಚಾರವಾಗಿದೆ ಎಂದು ತಿಳಿಸಿದರು.

Leave a Comment

Your email address will not be published. Required fields are marked *