ಪುತ್ತೂರು:ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಸಮಗ್ರ ನ್ಯೂಸ್: ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯಪದವಿನ ಕನ್ನಡ್ಕದಲ್ಲಿ ಜ. 7ರಂದು ನಡೆದಿದೆ.

. Ad Widget . Ad Widget . Ad Widget

ಪಡುವನ್ನೂರು ಗ್ರಾಮದ ಕನ್ನಡ ಕಜೆಮೂಲೆ ನಿವಾಸಿ ಚಂದ್ರಶೇಖರ್ ಗೌಡರ ಮಗಳು ದೀಕ್ಷಾ (16) ಇಂದು(ಜ.7) ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.

. Ad Widget .

ಮನೆಯಲ್ಲಿದ್ದ ತಂದೆ-ತಾಯಿ ಕೃಷಿ ಕೆಲಸದಲ್ಲಿ ತೊಡಗಿಸಿಕೊಂಡ ಸಂದರ್ಭದಲ್ಲಿ ಮನೆಯಲ್ಲಿ ಒಬ್ಬಳೇ ಇದ್ದಳು. ಮನೆಯ ರೂಮಲ್ಲಿ ಫ್ಯಾನ್ ಗೆ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪುತ್ತೂರು ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *