ನಟ ಯಶ್ ಬರ್ತ್‌ಡೇ ಬ್ಯಾನರ್ ಕಟ್ಟುತ್ತಿದ್ದ ವೇಳೆ ಅವಘಡ| ಮೂವರು ಯುವಕರು ವಿದ್ಯುತ್ ಶಾಕ್ ಗೆ ಬಲಿ

ಸಮಗ್ರ ನ್ಯೂಸ್: ನಟ ಯಶ್​ ಹುಟ್ಟುಹಬ್ಬಕ್ಕೆ ಬ್ಯಾನರ್ ಕಟ್ಟುತ್ತಿದ್ದಾಗ ಮೂವರು ಯುವಕರಿಗೆ ವಿದ್ಯುತ್ ತಗುಲಿ ಮೃತಪಟ್ಟಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಹನಮಂತ ಹರಿಜನ (21), ಮುರಳಿ ನಡವಿನಮನಿ (20) ನವೀನ್ ಗಾಜಿ (19) ಮೃತ ಯುವಕರು ಎಂದು ಗುರುತಿಸಲಾಗಿದೆ.

Ad Widget ... ..

ಯಶ್​ ಬರ್ತ್​ ಡೇಗಾಗಿ ಅಭಿಮಾನಿಗಳು ಗ್ರಾಮದಲ್ಲಿ ಬ್ಯಾನರ್ ಕಟ್ಟಲು ಮುಂದಾಗಿದ್ದದ್ದಾರೆ. ಬ್ಯಾನರ್ ಮೇಲೆ ಎತ್ತುತ್ತಿದ್ದಾಗ ಮೇಲೆ ಹಾದು ಹೋಗಿದ್ದ ಯುವಕರಿಗೆ ವಿದ್ಯುತ್ ಶಾಕ್ ತಗುಲಿದೆ. ಈ ವೇಳೆ ಅಲ್ಲೇ ನಿಂತುಕೊಂಡಿದ್ದ ಮಂಜುನಾಥ್ ಹರಿಜನ, ದೀಪಕ ಹರಿಜನ, ಪ್ರಕಾಶ ಮ್ಯಾಗೇರಿ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget

Leave a Comment

Your email address will not be published. Required fields are marked *