Ad Widget .

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್..!

ಸಮಗ್ರ ನ್ಯೂಸ್: ರಾಜ್ಯದ ಹಲವೆಡೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿದಂತೆ ಹಲವಡೆ ದಾಳಿ ನಡೆಸಲಾಗಿದೆ. ಬೆಂಗಳೂರಿನಲ್ಲಿಯೇ 10ಕ್ಕೂ ಹೆಚ್ಚು ಕಡೆ ದಾಳಿ ನಡೆಸಲಾಗಿದೆ. ಬೆಸ್ಕಾಂ ಅಧಿಕಾರಿ ನಾಗರಾಜ್ ನಿವಾಸಕ್ಕೆ ಬೆಳಗ್ಗೆಯೇ ಎಂಟ್ರಿ ನೀಡಿರುವ ಅಧಿಕಾರಿಗಳು ಪರಿಶೀಲನೆಯಲ್ಲಿ ತೊಡಗಿಕೊಂಡಿದ್ದಾರೆ. ಸಿವಿ ರಾಮನ್ ನಗರದ ನಾಗವಾರಪಾಳ್ಯದ ಮನೆ ಹಾಗೂ ಸರ್ಕಾರಿ ನಿವಾಸದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬೆಂಗಳೂರು ಬೆಸ್ಕಾಂ ಜನರಲ್ ಮ್ಯಾನೇಜರ್ ಆಗಿರುವ ನಾಗರಾಜ್ ವಿರುದ್ಧ ಅಕ್ರಮ ಆಸ್ತಿ ಆರೋಪ ಕೇಳಿ ಬಂದಿದ್ದು, ಕೂಡ್ಲಿಗಿ, ಗುಡೇಕೋಟೆ ನಿವಾಸ, ಪೆಟ್ರೋಲ್ ಬಂಕ್ ಹಾಗೂ ಸಂಬಂಧಿಕರ ನಿವಾಸದ ಮೇಲೆ ಬಳ್ಳಾರಿ ಲೋಕಾಯುಕ್ತ ಎಸ್ ಪಿ ಸಿದ್ದರಾಜು ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ನಾಗರಾಜ್​ಗೆ ಸಂಬಂಧಿಸಿದ ಶಿಕ್ಷಣ ಸಂಸ್ಥೆಗಳ ಮೇಲೆಯೂ ದಾಳಿ ನಡೆದಿದೆ. ಅಕ್ರಮ ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

Ad Widget . Ad Widget . Ad Widget .

ಬೆಂಗಳೂರು ಬಿಬಿಎಂಪಿ ಅಧಿಕಾರಿ ಮಂಜು ಎಂಬವವರ ಸಂಬಂಧಿ, ಹಲಗೂರು ಗ್ರಾ.ಪಂ ಸದಸ್ಯ ಸುರೇಂದ್ರ ಎಂಬವವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಳವಳ್ಳಿ ತಾಲೂಕು ಹಲಗೂರು ಪಟ್ಟಣದ ಜೆಪಿಎಂ ಬಡಾವಣೆಯಲ್ಲಿನ ಸುರೇಂದ್ರ ಅವರಿಗೆ ಸೇರಿದ ಮನೆ, ಸ್ವಗ್ರಾಮ ಗುಂಡಾಪುರ ಗ್ರಾಮದಲ್ಲಿ ಮನೆಗಳ ಮೇಲೂ ದಾಳಿ ನಡೆದಿದೆ.

ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ ನಿವಾಸದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಶೋಧ ಕಾರ್ಯ ಮುಂದುವರಿದಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೊಮ್ಮನಹಳ್ಳಿಯ ನಂಜೇಗೌಡ ನಿವಾಸ, ನಂಜುಂಡೇಶ್ವರ ಸ್ಟೋನ್ ಕ್ರಷರ್, ಕೋಚಿಮುಲ್ ಕೇಂದ್ರ ಕಚೇರಿಯಲ್ಲಿ ಶೋಧ ನಡೆಯುತ್ತಿದೆ. ನಿನ್ನೆಯಿಂದ ಶಾಸಕ ನಂಜೇಗೌಡ ಹಾಗು ಕುಟುಂಬಸ್ಥರನ್ನ ಹೊರಗೆ ಕಳುಹಿಸದೇ ಮನೆಯಲ್ಲಿರೋ ದಾಖಲೆಗಳನ್ನ ಪರಿಶೀಲನೆ ನಡೆಸಲಾಗುತ್ತಿದೆ.

Leave a Comment

Your email address will not be published. Required fields are marked *