ಇಂದು ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಜನವರಿ 10 ರಂದು ಬುಧವಾರ ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget ... ..

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗಲಿದೆ. ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳು, ಉತ್ತರ ಒಳನಾಡಿನ ಗದಗ, ಕೊಪ್ಪಳ, ರಾಯಚೂರು ಹೊರತುಪಡಿಸಿ ಉಳಿದ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವ ಇದೆ.

Ad Widget

ದಕ್ಷಿಣ ಕನ್ನಡ, ಹಾಸನ, ಕೊಡಗು ಜಿಲ್ಲೆಗಳ ವ್ಯಾಪ್ತಿಯಲ್ಲಿ ಗುಡುಗು ಸಹಿತ 7 ಸೆಂ.ಮೀ.ಗಿಂತ ಹೆಚ್ಚಿನ ಮಳೆಯಾಗುವ ಸಂಭವ ಇದೆ. ಮಂಗಳವಾರ ಸುಳ್ಯ, ಶಿವಮೊಗ್ಗ, ಭದ್ರಾವತಿ, ಶಿಕಾರಿಪುರ ಸೇರಿ ಹಲವೆಡೆ ಮಳೆಯಾಗಿದೆ.

Leave a Comment

Your email address will not be published. Required fields are marked *