ಬಾಲಿವುಡ್ ಲೆಜೆಂಡ್ ಕಿಂಗ್ ದಿಲೀಪ್ ಕುಮಾರ್ ವಿಧಿವಶ, ಕಣ್ಣೀರಲ್ಲಿ ಮುಳುಗಿದ ಚಿತ್ರರಂಗ

ಮುಂಬೈ: ಬಾಲಿವುಡ್‌ ಹಿರಿಯ ನಟ ದಿಲೀಪ್‌ ಕುಮಾರ್‌ ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ 98 ವರ್ಷದ ದಿಲೀಪ್‌ ಕುಮಾರ್‌ ಅವರನ್ನು ಎರಡು ದಿನಗಳ ಹಿಂದಷ್ಟೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.

. Ad Widget . Ad Widget . Ad Widget .

ಪಾಕಿಸ್ತಾನದ ಪೇಶಾವರದಲ್ಲಿ ಡಿಸೆಂಬರ್‌ 11, 1922 ರಲ್ಲಿ ಜನಿಸಿದ್ದ ಮಹಮ್ಮದ್‌ ಯೂಸೂಫ್‌ ಖಾನ್‌ ವಿಭಜನೆ ವೇಳೆ ಭಾರತಕ್ಕೆ ಬಂದಿದ್ದು ಬಾಲಿವುಡ್‌ ಚಿತ್ರರಂಗದಲ್ಲಿ ತಮ್ಮನ್ನು ಗುರುತಿಸಿಕೊಂಡ ಬಳಿಕ ದಿಲೀಪ್‌ ಕುಮಾರ್‌ ಎಂಬ ಹೆಸರಿನಿಂದಲೇ ಖ್ಯಾತರಾಗಿದ್ದರು.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಪತ್ನಿ ಸಾಯಿರಾಬಾನು ಜೊತೆ ಮುಂಬೈನಲ್ಲಿ ನೆಲೆಸಿದ್ದ ದಿಲೀಪ್‌ ಕುಮಾರ್‌ ಇಂದು ಬಾರದ ಲೋಕಕ್ಕೆ ತೆರಳಿದ್ದಾರೆ. ಹಿರಿಯ ನಟನ ನಿಧನಕ್ಕೆ ಬಾಲಿವುಡ್‌ ಚಿತ್ರರಂಗ ಕಂಬನಿ ಮಿಡಿದಿದೆ.

ಮುಂಬೈನ ಹಿಂದೂಜಾ ಆಸ್ಪತ್ರೆಯಲ್ಲಿ ದಿಲೀಪ್‌ ಕುಮಾರ್‌ ಅವರನ್ನು ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ 7-30 ರ ಸುಮಾರಿಗೆ ಇಹಲೋಕ ತ್ಯಜಿಸಿದ್ದಾರೆ.

Leave a Comment

Your email address will not be published. Required fields are marked *