Ad Widget .

ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಪತ್ತೆ… ಸಂಕ್ರಾಂತಿ ನೆಪದಲ್ಲಿ ಪೊಲೀಸರ ರೈಡ್

ಸಮಗ್ರ ನ್ಯೂಸ್: ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಪತ್ತೆಯಾಗಿದ್ದು, 2 ಕೋಟಿ ರೂ. ಮೌಲ್ಯದ ಸಾಮಾಗ್ರಿ ವಶಕ್ಕೆ ಪಡೆಯಲಾಗಿದೆ. ಹೈದ್ರಾಬಾದ್ ನಲ್ಲಿ ಈ ಜಾಲ ಪತ್ತೆಯಾಗಿದ್ದು. ಸರ್ಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸೋಪ್ ನಕಲಿ ತಯಾರಿಸಿ ಮಾರಾಟ ಮಾಡುತ್ತಿದು ನಕಲಿ ಉತ್ಪನ್ನ, ಪ್ಯಾಕಿಂಗ್​ಗೆ ಬಳಸುತ್ತಿದ್ದ ಕಾರ್ಟನ್ ಬಾಕ್ಸ್ ಸೇರಿದಂತೆ ಸಾಮಾಗ್ರಿಗಳು ಪತ್ತೆಯಾಗಿವೆ. ಹೈದರಾಬಾದಿನ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ಎಂಬುವರ ಬಂಧಿಸಲಾಗಿದ್ದು, ಮಾಲಕಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ನಕಲಿ ಮೈಸೂರ್ ಸ್ಯಾಂಡಲ್ ಸಾಬೂನು ಹೈದರಾಬಾದ್ ಮಾರುಕಟ್ಟೆಗೆ ಪೂರೈಕೆಯಾಗುತ್ತಿರುವ ಬಗ್ಗೆ ಸಚಿವ ಎಂ.ಬಿ. ಪಾಟೀಲ್​​ಗೆ ಅನಾಮಧೇಯ ಕರೆ ಬಂದಿದೆ. ಆ ಮೂಲಕ ಕಾರ್ಖಾನೆ ಎಂಡಿ ಡಾ. ಪ್ರಶಾಂತ್​ಗೆ ನಿಗಾ ವಹಿಸಲು ಸೂಚಿಸಿದ್ದಾರೆ. ಕಾರ್ಯಪ್ರವೃತ್ತರಾಗಿದ್ದ ಸಿಕಂದರಾಬಾದಿನಲ್ಲಿರುವ ಕೆಎಸ್​ಡಿಎಲ್ ಅಧಿಕೃತ ಮಾರಾಟ ಕಚೇರಿ ಸಿಬ್ಬಂದಿ ಹೈದರಾಬಾದಿನ ಕೆಲವು ಪ್ರದೇಶಗಳಲ್ಲಿ ನಕಲಿ ಸಾಬೂನು ಮಾರಾಟ ಕಂಡುಬಂದಿದೆ. ಸ್ವತಃ 1 ಲಕ್ಷ ರೂಪಾಯಿ ಬೆಲೆಯ ಉತ್ಪನ್ನ ಖರೀದಿಸಿ ಮೂಲ ಪತ್ತೆಗೆ ಕೆಎಸ್​ಡಿಎಲ್ ಸಿಬ್ಬಂದಿ ಮುಂದಾಗಿದ್ದರು.

Ad Widget . Ad Widget . Ad Widget .

ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಬೇಡಿಕೆ ಇದೆ ಎಂಬ ಕಾರಣ ಕೊಟ್ಟು 25 ಲಕ್ಷ ರೂ. ಬೆಲೆಯ ಸೋಪ್ ಖರೀದಿಗೆ ಕೆಎಸ್​ಡಿಎಲ್ ಸಿಬ್ಬಂದಿ ಆರ್ಡರ್ ಕೊಟ್ಟಿದ್ದರು. ಸ್ವತಃ ತಾವೇ ವಾಹನದಲ್ಲಿ ಸಾಗಿಸುವ ನೆಪದಲ್ಲಿ ಉತ್ಪಾದನೆ ಮಾಡುತ್ತಿದ್ದ ಸ್ಥಳಕ್ಕೆ ತೆರಳಿ ಈ ಪತ್ತೆ ಜಾಲವನ್ನು ಕಂಡುಹಿಡಿದಿದ್ದಾರೆ.

Leave a Comment

Your email address will not be published. Required fields are marked *