ಬಂಟ್ವಾಳದ ಬಿಜೆಪಿ ಶಾಸಕ ರಾಜೇಶ್ ನಾಯ್ಕ್ ಗೆ ಕಾರು ಡಿಕ್ಕಿ| ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಬಂಟ್ವಾಳದ ಬಿಜೆಪಿ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಕಾರು ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ತೆಂಕ ಎಡಪದವು ಬಳಿ ನಡೆದಿದೆ.

Ad Widget ... ..

ಇಂದು ಎಡಪದವು ಗೋಪಾಲಕೃಷ್ಣ ದೇವಸ್ಥಾನಕ್ಕೆ ತೆರಳಿ ಹಿಂದಿರುಗುತ್ತಿದ್ದಾಗ ರಾಜೇಶ್ ನಾಯ್ಕ್​ಗೆ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ. ಈ ಹಿನ್ನೆಲೆಯಲ್ಲಿ ರಾಜೇಶ್ ನಾಯ್ಕ್​ಗೆ ಗಾಯವಾಗಿದೆ. ಸಂಕ್ರಮಣದ ಅಂಗವಾಗಿ ಪೂಜೆ ಮುಗಿಸಿ ಕಾರಿನತ್ತ ನಡೆದುಕೊಂಡು ಬರುವಾಗ ಮೂಡಬಿದ್ರೆ ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ. ಕಾರು ಗುದ್ದಿದ ರಭಸಕ್ಕೆ ಶಾಸಕ ರಾಜೇಶ್ ನಾಯ್ಕ್ ಕೆಳಗೆ ಬಿದ್ದಿದ್ದಾರೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Ad Widget

ರಾಜೇಶ್ ನಾಯ್ಕ್​ ಕಾರಿಗೆ ಡಿಕ್ಕಿ ಹೊಡೆದ ಬಳಿಕ ಎಸ್ಕೇಪ್ ಆಗುತ್ತಿದ್ದ ಸ್ವಿಫ್ಟ್ ಕಾರನ್ನು ಸ್ಥಳೀಯರು ಗುರುಪುರದಲ್ಲಿ ಅಡ್ಡಗಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಬಜ್ಪೆ ಪೊಲೀಸರು, ಚಾಲಕನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ರಾಜೇಶ್ ನಾಯ್ಕ್​ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಮನೆಗೆ ವಾಪಸ್ ಆಗಿದ್ದಾರೆ.

Leave a Comment

Your email address will not be published. Required fields are marked *