Ad Widget .

ಘಾಟಿ ಸುಬ್ರಹ್ಮಣ್ಯದಲ್ಲಿ ತಪ್ಪಿದ ಅನಾಹುತ| ರಥದ ಚಕ್ರದ ಬಳಿ ಬಿದ್ದ ಮಹಿಳೆ

ಸಮಗ್ರ ನ್ಯೂಸ್: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯದಲ್ಲಿ ಇಂದು ಬ್ರಹ್ಮ ರಥೋತ್ಸವ ನಡೆದಿದ್ದು ಬ್ರಹ್ಮ ರಥೋತ್ಸವದ ವೇಳೆ ಭಾರಿ ಅನಾಹುತವೊಂದು ತಪ್ಪಿದೆ. ರಥ ಎಳೆಯುವಾಗ ನೂಕುನುಗ್ಗಲು ಉಂಟಾಗಿ ಚಕ್ರದ ಬಳಿ ಮಹಿಳೆ ಬಿದ್ದಿದ್ದರು. ಕೂಡಲೇ ಎಚ್ಚೆತ್ತ ಪೊಲೀಸರು ಮತ್ತು ದೇವಸ್ಥಾನದ ಸಿಬ್ಬಂದಿ ಮಹಿಳೆಯನ್ನು ಮೇಲಕ್ಕೆ ಎತ್ತಿದ್ದಾರೆ. ಬಳಿಕ ಮಹಿಳೆಯನ್ನು ಪಕ್ಕಕ್ಕೆ ಸರಿಸಿದ್ದಾರೆ. ಕೂದಲೆಳೆ ಅಂತರದಲ್ಲಿ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಪುಷ್ಯ ಶುದ್ದ ಷಷ್ಟಿ ಹಿನ್ನೆಲೆಯಲ್ಲಿ ಇಂದು ಘಾಟಿ ಸುಬ್ರಮಣ್ಯದಲ್ಲಿ ಬ್ರಹ್ಮ ರಥೋತ್ಸವ ನಡೆಯಿತು. ಮದ್ಯಾಹ್ನ 12.15ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ರಥೋತ್ಸವಕ್ಕೆ ಚಾಲನೆ ನೀಡಿದರು. ಕುಕ್ಕೆ ಸುಬ್ರಹ್ಮಣ್ಯದಲ್ಲಿ ರಥೋತ್ಸವ ನಡೆದ ಮೇಲೆ, ಈ ರಥೋತ್ಸವ ಜರಗುತ್ತದೆ. ರಥೋತ್ಸವ ಹಿನ್ನೆಲೆಯಲ್ಲಿ ದೇವಾಲಯಕ್ಕೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿದೆ. 50 ಸಾವಿರ ಕ್ಕೂ ಹೆಚ್ಚು ಜನ ಕ್ಷೇತ್ರಕ್ಕೆ ಆಗಮಿಸಿದ್ದಾರೆ. ಕ್ಷೇತ್ರದಲ್ಲಿ 500 ಕ್ಕೂ ಹೆಚ್ಚು ಜನ ಪೊಲೀಸರನ್ನು ನಿಯೋಜಿಸಲಾಗಿದೆ. ಭಕ್ತರಿಗೆ ತೊಂದರೆಯಾಗದಂತೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

Ad Widget . Ad Widget . Ad Widget .

Leave a Comment

Your email address will not be published. Required fields are marked *