ಸಮಗ್ರ ನ್ಯೂಸ್: ನಾಗರಿಕ ಸೇವಾ ಪರೀಕ್ಷೆಗಳಿಗೆ ಕೋಚಿಂಗ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಕೋಚಿಂಗ್ ಸೆಂಟರ್‍ಗಳಿಗೆ ಉನ್ನತ ಶಿಕ್ಷಣ ಇಲಾಖೆಯಲ್ಲಿ ನೋಂದಣಿ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕೋಚಿಂಗ್ ಸೆಂಟರ್‍ಗಳ ನೋಂದಣಿ ದೇಶದಲ್ಲಿ ಕಡ್ಡಾಯವಾಗಿರಬೇಕು. ರಾಜ್ಯದಲ್ಲಿ ಸಾಕಷ್ಟು ಕೋಚಿಂಗ್ ಸೆಂಟರ್‍ಗಳಿವೆ. ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವುದಾಗಿ ಹೇಳಿ ಅವರಿಂದ ಹಣ ವಸೂಲಿ ಮಾಡುತ್ತಾರೆ. ಆದ್ದರಿಂದ, ಕೋಚಿಂಗ್ ಸೆಂಟರ್‍ಗಳನ್ನು ನೋಂದಾಯಿಸಲು ಸರ್ಕಾರ ನಿರ್ಧರಿಸಿದೆ.
15 ದಿನಗಳಲ್ಲಿ 25,000 ಶುಲ್ಕ ಪಾವತಿಸಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನೋಂದಾಯಿಸಿಕೊಳ್ಳುವಂತೆ ಕೋಚಿಂಗ್ ಸಂಸ್ಥೆಗಳಿಗೆ ಸರ್ಕಾರ ಸುತ್ತೋಲೆಯಲ್ಲಿ ನಿರ್ದೇಶಿಸಿದೆ. ತಪ್ಪಿದಲ್ಲಿ ಕರ್ನಾಟಕ ಶಿಕ್ಷಣ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.