ಸಮಗ್ರ ಉದ್ಯೋಗ: National Institute of Mental Health and Neuro Sciences ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಸೀನಿಯರ್ ರಿಸರ್ಚ್ ಫೆಲೋ/ ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜನವರಿ 18, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಬೇಗ ಇ-ಮೇಲ್ ಮಾಡುವ ಮೂಲಕ ಅಪ್ಲೈ ಮಾಡಿ.
ಶೈಕ್ಷಣಿಕ ಅರ್ಹತೆ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕ್ಲಿನಿಕಲ್ ಸೈಕಾಲಜಿಯಲ್ಲಿ ಎಂ.ಫಿಲ್, ಎಂ.ಎಸ್ಸಿ, ಸೈಕಾಲಜಿಯಲ್ಲಿ ಎಂಎ ಪೂರ್ಣಗೊಳಿಸಿರಬೇಕು.
ವಯೋಮಿತಿ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹ 37,000-42,000
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ [email protected] ಗೆ ನಾಳೆಯೊಳಗೆ ಕಳುಹಿಸಬೇಕು.